ಶೃಂಗೇರಿ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟ ಸರಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗ ನೆಮ್ಮಾರು ಇಲ್ಲಿನ ಕ್ರೀಡಾಂಗಣದಲ್ಲಿ ಅತ್ಯಂತ ಯಶಸ್ವಿಯಾಗಿ ನಡೆಯಿತು.
ಇದನ್ನೂ ಓದಿ: ರಾಜ್ಯದ SC, ST ಸಮುದಾಯದವರ ಗಮನಕ್ಕೆ; ಇಲ್ಲಿದೆ ನಿಮಗೆ ಮುಖ್ಯ ಮಾಹಿತಿ

ಎಸ್ ಡಿ ಎಮ್ ಸಿ ಅಧ್ಯಕ್ಷರಾದ ಶಶಿಕಲಾ ಶಂಕ್ರಪ್ಪ ಇವರು ಧ್ವಜಾರೋಹಣ ನೆರವೇರಿಸಿದರು. ಗ್ರಾಮಪಂಚಾಯತಿ ನೆಮ್ಮಾರು ಇಲ್ಲಿನ ಸದಸ್ಯರಾದ ಪುಟ್ಟಪ್ಪ ಹೆಗ್ಗಡೆ ಇವರು ಕ್ರೀಡಾಜ್ಯೋತಿ ಸ್ವೀಕರಿಸಿದರು. ಗ್ರಾಮಪಂಚಾಯತಿ ಉಪಾಧ್ಯಕ್ಷರಾದ ವಾಣಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಸಾರ್ವಜನಿಕರಿಗಾಗಿ ಅಥ್ಲೆಟಿಕ್ಸ್ ಹಾಗೂ ಕಬ್ಬಡಿ, ವಾಲಿಬಾಲ್, ಥ್ರೋಬಾಲ್, ಖೋ ಖೋ, ಆಟಗಳನ್ನು ಆಯೋಜಿಸಲಾಗಿದ್ದು, ಶೃಂಗೇರಿ ತಾಲ್ಲೂಕಿನ ಎಲ್ಲ ಕ್ರೀಡಾಪಟುಗಳು ಅತ್ಯಂತ ಉತ್ಸಾಹದಿಂದ ಸ್ಪರ್ಧಿಸಿದರು.
ಇದನ್ನೂ ಓದಿ: ರಾಜ್ಯದ SC, ST ಸಮುದಾಯದವರ ಗಮನಕ್ಕೆ; ಇಲ್ಲಿದೆ ನಿಮಗೆ ಮುಖ್ಯ ಮಾಹಿತಿ
ಗ್ರಾಮ ಪಂಚಾಯತಿ ಸದಸ್ಯರಾದ ಲೀಲಾವತಿ, ಜನಾರ್ಧನ್, ಉಮೇಶ್, ಜ್ಯೋತಿ, ತಾಲ್ಲೂಕು ಪಂಚಾಯತಿ ಮಾಜಿ ಸದಸ್ಯರಾದ ವೆಂಕಟೇಶ್ ಹೆಗಡೆ, ಶಾರದಾ ವಿದ್ಯಾನಿಧಿ ಯೋಜನೆಯ ಅಧ್ಯಕ್ಷರಾದ ರವಿಶಂಕರ್, ಪಿಸಿಎಲ್ ಡಿ ಬ್ಯಾಂಕ್ ನಿರ್ದೇಶಕರಾದ ಸುಂದರೇಶ್, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಮಣಿಕಂಠ, ಎಸ್ ಡಿ ಎಮ್ ಸಿ ಸದಸ್ಯರು, ವಿಎಸ್ ಎಸ್ ಎನ್ ನ ನಿರ್ದೇಶಕರು ಉಪಸ್ಥಿತರಿದ್ದರು.












