ಶೃಂಗೇರಿ: (ನ್ಯೂಸ್ ಮಲ್ನಾಡ್ ವರದಿ) ರಾಜ್ಯ ಮಹಿಳಾ ಆಯೋಗಕ್ಕೆ ಮಹಿಳಾ ನೌಕರರ ದೂರಿನ ಹಿನ್ನೆಲೆಯಲ್ಲಿ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಗೆ ಜಿಲ್ಲಾ ಆಂತರಿಕ ತನಿಖಾ ತಂಡ ಭೇಟಿ ನೀಡಿದೆ.
ಇದನ್ನೂ ಓದಿ: ರೈತರಿಗೆ ಸಿಹಿ ಸುದ್ದಿ ಕೊಟ್ಟ ರಾಜ್ಯ ಸರ್ಕಾರ; ಬೆಂಬಲ ಬೆಲೆ ಯೋಜನೆಯಡಿಯಲ್ಲಿ ವಿವಿಧ ಬೆಳೆಗಳ ಖರೀದಿ ಅವಧಿ ವಿಸ್ತರಣೆ

ಡಿ ಗ್ರೂಪ್ ಮಹಿಳಾ ನೌಕರರೊಬ್ಬರು ಆಡಳಿತ ವೈದ್ಯಾಧಿಕಾರಿಗಳಾದ ಡಾ. ಶ್ರೀನಿವಾಸ್‌ರವರಿಂದ ಮಾನಸಿಕ ಕಿರುಕುಳ ಉಂಟಾಗುತ್ತಿರುವುದಲ್ಲದೇ, ಅರ್ಜಿದಾರರುಗಳೊಂದಿಗೆ ಆಶ್ಲೀಲವಾಗಿ ಏಕವಚನದಲ್ಲಿ ನಿಂದಿಸುತ್ತಿದ್ದಾರೆಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗಕ್ಕೆ ದೂರು ನೀಡಿದ್ದು, ಈ ಸಂಬಂಧ ತನಿಖೆ ನಡೆಸಿ ಕ್ರಮ ವಹಿಸುವಂತೆ ಜಿಲ್ಲಾ ಅಂತರಿಕ ಸಮಿತಿಗೆ ಸೂಚಿಸಿರುವ ಹಿನ್ನೆಲೆಯಲ್ಲಿ ಜಿಲ್ಲಾ ಅಂತರಿಕ ಸಮಿತಿ `ಚಿಕ್ಕಮಗಳೂರು ತಂಡದಿಂದ ತಾಲ್ಲೂಕು ಆಸ್ಪತ್ರೆಗೆ ಭೇಟಿ ನೀಡಿ ವಿಚಾರಣೆ ನಡೆಸಲಾಗುತ್ತಿದೆ.

ಸಮಿತಿಯ ಜಂಟಿ ಅಧ್ಯಕ್ಷರಾಗಿ ಡಾ.ಸೀಮಾ.ಎಸ್. ಹಾಗೂ ಡಾ. ಚೇತನಾ.ಎನ್.ಆರ್ ಇವರ ತಂಡ ಭೇಟಿ ನೀಡಿದೆ. ಸತ್ಯಾಸತ್ಯತೆ ತನಿಖೆಯಿಂದ ತಿಳಿಯಬೇಕಿದೆ.















