ಶೃಂಗೇರಿ: (ನ್ಯೂಸ್ ಮಲ್ನಾಡ್ ವರದಿ) ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಪಟ್ಟಣದಲ್ಲಿ ಒಂದೇ ದಿನ ಅಕ್ಕಪಕ್ಕದ ಅಂಗಡಿಗಳಲ್ಲಿ ರಾತ್ರಿ ಕಳ್ಳರು ಕೈಚಳಕ ತೋರಿಸಿದ್ದಾರೆ.
ಇದನ್ನೂ ಓದಿ: ಅನರ್ಹರ ರೇಷನ್ ಕಾರ್ಡ್ ರದ್ದು!; ಈ ಪಟ್ಟಿಯಲ್ಲಿ ನಿಮ್ಮ ಹೆಸರಿದ್ಯಾ ಹೀಗೆ ಚೆಕ್ ಮಾಡಿ

ಹೌದು, ಶೃಂಗೇರಿ ಪಟ್ಟಣದ ಮುಖ್ಯ ಬಸ್ ನಿಲ್ದಾಣದ ಬಳಿ ಇರುವ ಮೆಡಿಕಲ್ ಹಾಗೂ ಅದರ ಅಕ್ಕ ಪಕ್ಕದ ಅಂಗಡಿಗಳಲ್ಲಿ ಕಳ್ಳತನ ನಡೆಸಿದ್ದಾರೆ. ಅಲ್ಲದೆ ಮೊನ್ನೆ ಶೃಂಗೇರಿ ತಾಲೂಕಿನ ಕಲ್ಕಟ್ಟೆಯ ಮನೆಯೊಂದರಲ್ಲಿ ಕಳ್ಳತನ ನಡೆಸಿ ಹಣ, ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ.
ಇದನ್ನೂ ಓದಿ: ಅರಣ್ಯ ಒತ್ತುವರಿ ಮಾಡಿದವರಿಗೆ ಬಿಗ್ ಶಾಕ್; ನಾಳೆಯಿಂದ 10 ಜಿಲ್ಲೆಯಲ್ಲಿ ತೆರವು ಕಾರ್ಯ ಆರಂಭ
ಪಟ್ಟಣದಲ್ಲಿ ಕಳ್ಳತನ ಪ್ರಕರಣಗಳು ಹೆಚ್ಚುತ್ತಿದ್ದು, ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿದೆ. ಘಟನೆ ಕುರಿತು ಶೃಂಗೇರಿ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಳ್ಳರಿಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ.
ಇದನ್ನೂ ಓದಿ: ಗೃಹಲಕ್ಷ್ಮಿ ಯೋಜನೆಯ 2,000 ಹಣ ಬಂದಿಲ್ವಾ?; ಅಪ್ಡೇಟ್ ನೀಡಿದ ರಾಜ್ಯ ಸರ್ಕಾರ, ಏನಿದೆ ನೋಡಿ












