ಶೃಂಗೇರಿ: ಬಸ್ ನಿಲ್ದಾಣದಲ್ಲಿ ಕಳ್ಳರ ಕೈಚಳಕ | ಟ್ರೇ ಬಾಕ್ಸ್ ಸಮೇತ ಹಣ ಎಗರಿಸಿದ ಕಳ್ಳರು

ಶೃಂಗೇರಿ: (ನ್ಯೂಸ್ ಮಲ್ನಾಡ್ ವರದಿ)  KSRTC ಬಸ್ ನೊಳಗೆ ಕಳ್ಳರು ನುಗ್ಗಿ ಟ್ರೇ ಬಾಕ್ಸ್ ಹಾಗೂ ಟಿಕೆಟ್ ಮೆಷಿನ್ ನನ್ನು ಕದ್ದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನಲ್ಲಿ ನಡೆದಿದೆ.

 

ಇದನ್ನೂ ಓದಿ; ಮಹಾನಗರ ಪಾಲಿಕೆಯಲ್ಲಿ ಉದ್ಯೋಗಾವಕಾಶ; 119 ಪೌರಕಾರ್ಮಿಕರ ನೇಮಕಾತಿಗೆ ಅರ್ಜಿ ಆಹ್ವಾನ; 17,000-28,950 ಮಾಸಿಕ ವೇತನ

ಮೈಸೂರಿನಿಂದ ಶೃಂಗೇರಿಗೆ ಬಂದು ಬಸ್ ನಿಲ್ದಾಣದಲ್ಲಿ ನಿಲ್ಲಿಸಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ನ ನಿರ್ವಾಹಕ ಮೂರ್ತಿಯವರ ಟಿಕೆಟ್ ಮೆಷಿನ್ ಹಾಗೂ ಟ್ರೇ ಬಾಕ್ಸ್ ಸಮೇತ ಅದರೊಳಗಿದ್ದ 15,000 ಹಣವನ್ನು ಕಳವು ಮಾಡಲಾಗಿದೆ. ಈ ಸಂಬಂಧ ಶೃಂಗೇರಿ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇನ್ನು ರಾಷ್ಟ್ರ ಕವಿ ಕುವೆಂಪು ಬಸ್ ನಿಲ್ದಾಣದಲ್ಲಿ ಭದ್ರತೆ ದೃಷ್ಟಿಯಿಂದ ಸರಿಯಾದ ಸಿಸಿಟಿವಿ ವ್ಯವಸ್ಥೆ ಇದ್ದಿದರೆ ಈ ರೀತಿಯ ಘಟನೆ ನಡೆಯುತ್ತಿರಲಿಲ್ಲ.

ಇದನ್ನೂ ಓದಿ; SC-ST ವರ್ಗದವರಿಗೆ ಮತ್ತೊಂದು ಗುಡ್ ನ್ಯೂಸ್; ಉಚಿತ ವಾಹನ ತರಬೇತಿಗೆ ಅರ್ಜಿ ಆಹ್ವಾನ; ಯಾವ ವಾಹನ ತರಬೇತಿ, ಎಲ್ಲಿ, ಅರ್ಜಿ ಸಲ್ಲಿಕೆ ಹೇಗೆ?

ಚಿಕ್ಕಮಗಳೂರು: ಜಿಲ್ಲಾಸ್ಪತ್ರೆ ವೈದ್ಯರ ನಿರ್ಲಕ್ಷ್ಯ ಆರೋಪ; ಬಾಣಂತಿ ಮೃತ್ಯು

 

ಚಿಕ್ಕಮಗಳೂರು:  (ನ್ಯೂಸ್ ಮಲ್ನಾಡ್ ವರದಿ) ಜಿಲ್ಲಾಸ್ಪತ್ರೆಯ ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿ ಮೃತಪಟ್ಟಿದ್ದಾಳೆಂದು ಆರೋಪಿಸಲಾಗಿದೆ. ಕಡೂರು ತಾಲೂಕಿನ ವಡರೇಹಳ್ಳಿ ತಾಂಡ್ಯದ ನಿವಾಸಿ ರಂಜಿತಾ ಬಾಯಿ (22) ಮೃತ ಮಹಿಳೆ.

ಸಿಬ್ಬಂದಿಯ ನಿರ್ಲಕ್ಷ್ಯದಿಂದ ಬಾಣಂತಿ ಮೃತಪಟ್ಟಿದ್ದಾಳೆಂದು ಆರೋಪಿಸಿ ಮಹಿಳೆಯ ಸಂಬಂಧಿಕರು ಆಸ್ಪತ್ರೆಯ ಆವರಣದಲ್ಲಿ ಕೆಲ ಕಾಲ ಪ್ರತಿಭಟಿಸಿದ ಘಟನೆ ನಡೆದಿದೆ. ಶನಿವಾರ ಮಧ್ಯಾಹ್ನ ಹೆರಿಗೆಯಾಗಿದ್ದು, ರಾತ್ರಿ ವೇಳೆ ರಂಜಿತಾ ಬಾಯಿ ಅವರ ಆರೋಗ್ಯದಲ್ಲಿ ಏರುಪೇರಾಗಿದೆ. ಈ ಬಗ್ಗೆ ಮಾಹಿತಿ ನೀಡಿದರೂ ಅಸ್ಪತ್ರೆ ಸಿಬ್ಬಂದಿ ಸ್ಪಂದಿಸಿಲ್ಲ ಸಕಾಲದಲ್ಲಿ ವೈದ್ಯರು ಬಂದು ತಪಾಸಣೆ ಮಾಡಿಲ್ಲ, ಹೆರಿಗೆ ಮಾಡಿಸಿದ್ದಕ್ಕೆ ಆಸ್ಪತ್ರೆ ಸಿಬ್ಬಂದಿ ಹಣ ಕೇಳುತ್ತಿದ್ದಾರೆ ಎಂದು ಸಂಬಂಧಿಕರು ಆರೋಪಿಸಿದ್ದಾರೆ.

ಬಾಣಂತಿಯ ಸಾವಿಗೆ ಕಾರಣರಾದವರ ವಿರುದ್ಧ ಸೂಕ್ತ ಕ್ರಮಕೈಗೊಳ್ಳಬೇಕೆಂದು ಸಂಬಂಧಿಕರು ಆಗ್ರಹಿಸಿದರು. ಈ ವೇಳೆ ಸ್ಥಳಕ್ಕೆ ಆಗಮಿಸಿದ ವೈದ್ಯಾಧಿಕಾರಿಗಳು ಸೂಕ್ತ ಕ್ರಮದ ಭರವಸೆ ನೀಡಿದ್ದರಿಂದ ಸಂಬಂಧಿಕರು ಪ್ರತಿಭಟನೆ ಕೈಬಿಟ್ಟಿದ್ದಾರೆಂದು ತಿಳಿದು ಬಂದಿದೆ.

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.

ಕಾಫಿನಾಡು ಚಿಕ್ಕಮಗಳೂರು ಹುಟ್ಟೂರು. ಬರವಣಿಗೆ, ಪ್ರವಾಸ ಆಸಕ್ತ ವಿಷಯಗಳು. ಕನ್ನಡ ಡಿಜಿಟಲ್ ಪತ್ರಿಕೋದ್ಯಮದಲ್ಲಿ ಸುಮಾರು 5 ವರ್ಷಗಳ ಅನುಭವ.