ಶೃಂಗೇರಿ: (ನ್ಯೂಸ್ ಮಲ್ನಾಡ್ ವರದಿ) ನೇಣು ಬಿಗಿದುಕೊಂಡು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಸಂಕ್ಲಾಪುರದಲ್ಲಿ ನಡೆದಿದೆ. ಸಂಕ್ಲಾಪುರ ನಿವಾಸಿ ಫಲಹ (26) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಯುವಕ.
ಇದನ್ನೂ ಓದಿ: ಬಿಗ್ ಬಾಸ್ ಕನ್ನಡ ಶೋಗೆ ಫೈನಲ್ ಆದ 18 ಸ್ಪರ್ಧಿಗಳು ಇವರೇ?

ಸೌಂಡ್ಸ್ ಕೆಲಸ ಮಾಡಿಕೊಂಡಿದ್ದ ಫಲಹ ಸಾಲ ಮಾಡಿಕೊಂಡಿದ್ದು ಇದರಿಂದ ಚಿಂತೆಗೀಡಾಗಿದ್ದ ಎನ್ನಲಾಗಿದೆ. ನಿಖರ ಕಾರಣ ಇನ್ನಷ್ಟೇ ತಿಳಿಯಬೇಕಿದೆ.
ಶೃಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇದನ್ನೂ ಓದಿ: ಅರಣ್ಯ ಭೂಮಿ ಒತ್ತುವರಿ ತೆರವಿಗೆ SIT ರಚಿಸಿ ಆದೇಶ












