ಕೊಪ್ಪ: (ನ್ಯೂಸ್ ಮಲ್ನಾಡ್ ವರದಿ) ತಾಲ್ಲೂಕಿನ ಕನ್ನಡ ಸಾಹಿತ್ಯ ಪರಿಷತ್ತಿನ ನೂತನ ಮಹಿಳಾ ಘಟಕದ ಅಧ್ಯಕ್ಷರಾಗಿ ಶ್ರೀನಿಧಿ ದಿನೇಶ್ ಅವರನ್ನು ನೇಮಕ ಮಾಡಲಾಗಿದೆ.
ಇದನ್ನೂ ಓದಿ: ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸೂರಿ ಶ್ರೀನಿವಾಸ್ ಅವರು, ಕೊಪ್ಪ ತಾಲ್ಲೂಕಿನ ಕನ್ನಡ ಸಾಹಿತ್ಯ ಪರಿಷತ್ತಿನ ಮಹಿಳಾ ಘಟಕದ ಅಧ್ಯಕ್ಷರಾಗಿ ಸಂಘಟಕಿ, ಉಪನ್ಯಾಸಕಿ ಶ್ರೀನಿಧಿ ದಿನೇಶ್ ಅವರನ್ನು ನೇಮಕ ಮಾಡಲಾಗಿದೆ ಎಂದು ತಿಳಿಸಿದರು.
ಇದನ್ನೂ ಓದಿ: ಈ ದಿನ SSLC ಫಲಿತಾಂಶ ಪ್ರಕಟ
ಕೊಪ್ಪ ತಾಲ್ಲೂಕಿನಲ್ಲಿ ಸಾಹಿತಿಗಳನ್ನು ಚಿಂತಕರನ್ನು ಒಟ್ಟು ಗೂಡಿಸಿಕೊಂಡು ಕಾವ್ಯ ಕಮ್ಮಟ, ಕವಿಗೋಷ್ಠಿಗಳನ್ನು ಆಯೋಜಿಸುವ ಮೂಲಕ ಕವನಗಳ ರಚನೆ, ಪ್ರತಿ ಹೋಬಳಿ ಹಂತದಲ್ಲಿ ಕಸಾಪ ಶಾಖೆಗಳನ್ನು ತೆರೆದು ಸ್ಥಳೀಯ ಪ್ರತಿಭೆಗಳಿಗೆ ಅವಕಾಶ ಕಲ್ಪಿಸಲಾಗುವುದು. ಶಾಲಾ ಕಾಲೇಜುಗಳಲ್ಲಿ ಸಾಹಿತ್ಯ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಪರಿಷತ್ತನ್ನು ಶಾಲಾ ಕಾಲೇಜುಗಳಿಗೆ ಪರಿಚಯಿಸುವುದು ಮತ್ತು ಮನೆಯಂಗಳದಲ್ಲಿ ಸಾಹಿತ್ಯ ಗೋಷ್ಠಿ ಏರ್ಪಡಿಸಲಾಗುವುದು. ಎಲ್ಲರ ಸಹಕಾರ ಪಡೆದು ತಾಲೂಕು ಅಥವಾ ಜಿಲ್ಲಾ ಮಟ್ಟದ ಮಹಿಳಾ ಸಾಹಿತ್ಯ ಸಮ್ಮೇಳನ ಆಯೋಜನೆ ಮಾಡಲಾಗುವುದು ಎಂದು ನೂತನ ಅಧ್ಯಕ್ಷರಾದ ಶ್ರೀನಿಧಿ ದಿನೇಶ್ ತಿಳಿಸಿದರು.
ಇದನ್ನೂ ಓದಿ: ಎನ್ಸಿಆರ್ಟಿಸಿ ಇಂದ ನೇಮಕಾತಿ; 18,000 ದಿಂದ ಸಂಬಳ












