ಶೃಂಗೇರಿ: (ನ್ಯೂಸ್ ಮಲ್ನಾಡ್ ವರದಿ) ಹಾಲಿ 33 ಕೆ.ವಿ ಬಾಳೆಹೊನ್ನೂರು- ಶೃಂಗೇರಿ ವಿದ್ಯುತ್ ಮಾರ್ಗದಲ್ಲಿ ಮಧ್ಯಂತರ ಕಂಬ ಅಳವಡಿಕೆ ಕಾಮಗಾರಿ ಹಾಗೂ 33 ಕೆ.ವಿ ಮತ್ತು 11 ಕೆ.ವಿ ವಿದ್ಯುತ್ ಮಾರ್ಗದ ನಿರ್ವಹಣೆ ಹಮ್ಮಿಕೊಂಡಿರುವುದರಿಂದ 28.10.2023 (ಶನಿವಾರ) ಒಂದು ದಿನ ವಿದ್ಯುತ್ ನಿಲುಗಡೆ ಆಗಲಿದೆ.
ಇದನ್ನೂ ಓದಿ; ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?-25.10.2023

28.10.2023 ರ ಶನಿವಾರದಂದು ಹಾಲಿ 33 ಕೆ.ವಿ ಬಾಳೆಹೊನ್ನೂರು- ಶೃಂಗೇರಿ ವಿದ್ಯುತ್ ಮಾರ್ಗದಲ್ಲಿ ಮಧ್ಯಂತರ ಕಂಬ ಅಳವಡಿಕೆ ಕಾಮಗಾರಿ ಹಾಗೂ 33 ಕೆ.ವಿ ಮತ್ತು 11 ಕೆ.ವಿ ವಿದ್ಯುತ್ ಮಾರ್ಗದ ನಿರ್ವಹಣೆ ಹಮ್ಮಿಕೊಂಡಿರುವುದರಿಂದ 28.10.2023 ರಂದು 9:00 ರಿಂದ ಸಂಜೆ 6:00 ಗಂಟೆಯವರೆಗೆ 33/11 ಕೆವಿ ವಿ.ವಿ ಕೇಂದ್ರ ಶೃಂಗೇರಿ ಹಾಗೂ 33/11 ಕೆ.ವಿ ವಿ.ವಿ ಕೇಂದ್ರ ಜಯಪುರ ದಿಂದ ಹೊರಹೊಮ್ಮುವ ಎಲ್ಲಾ ಪಟ್ಟಣ ಹಾಗೂ ಗ್ರಾಮೀಣ ಫೀಡರ್ ಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದೆ ಎಂದು ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದೆ.

Khandya Temple: ಹುಲಿ ಉಗುರು ಧರಿಸಿದ್ದ ಆರೋಪದಡಿ ದೇವಸ್ಥಾನದ ಅರ್ಚಕರಿಬ್ಬರ ಬಂಧನ
ಬಾಳೆಹೊನ್ನೂರು: (ನ್ಯೂಸ್ ಮಲ್ನಾಡ್ ವರದಿ) ಹುಲಿ ಉಗುರಿನ ಡಾಲರ್ ಹಾಕಿಕೊಂಡಿದ್ದ ಆರೋಪದ ಮೇಲೆ ದೇವಸ್ಥಾನದ ಪ್ರಧಾನ ಅರ್ಚಕರಿಬ್ಬರನ್ನು ಬಂಧಿಸಿರುವ ಘಟನೆ ಚಿಕ್ಕಮಗಳೂರು ತಾಲ್ಲೂಕಿನ ಖಾಂಡ್ಯದಲ್ಲಿ ನಡೆದಿದೆ.
ಈ ಹಿಂದೆ ಇಬ್ಬರನ್ನು ಬಂಧಿಸಿದ್ದ ಅರಣ್ಯ ಇಲಾಖೆ
ಹುಲಿ ಉಗುರು ಧರಿಸಿದ್ದ ಆರೋಪದಡಿ ಮೂಡಿಗೆರೆ ತಾಲೂಕಿನ ಇಬ್ಬರನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದರು. ತಾಲೂಕಿನ ಬಿ.ಹೊಸಳ್ಳಿಯ ಕುಂಡ್ರ ನಿವಾಸಿ ಸತೀಶ್ ಮತ್ತು ಹುಲ್ಲೇ ಮನೆ ಕುಂದೂರು ನಿವಾಸಿ ರಂಜಿತ್ ರನ್ನು ಬಂಧಿಸಲಾಗಿತ್ತು.
ಹುಲಿ ಉಗುರು ಧರಿಸಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಅರಣ್ಯ ಇಲಾಖೆ ಸಿಬ್ಬಂದಿ ಮೂಡಿಗೆರೆ ಕಡೆಯಿಂದ ಚಿಕ್ಕಮಗಳೂರಿಗೆ ಪ್ರಯಾಣಿಸುತ್ತಿದ್ದ ಸತೀಶ್‌ನನ್ನು ಚಿಕ್ಕಮಗಳೂರು ಸಮೀಪದ ಮತ್ತಾವರ ಅರಣ್ಯ ಮಾಹಿತಿ ಕೇಂದ್ರದ ಬಳಿ ತಡೆದು ಬಂಧಿಸಿದ್ದರು.
ಸತೀಶ್ ಕುತ್ತಿಗೆಗೆ ಧರಿಸಿದ್ದ ಬೆಳ್ಳಿ ಸರದಲ್ಲಿ ಹುಲಿ ಉಗುರು ಇರುವುದು ಪತ್ತೆಯಾಗಿದೆ. ಆರೋಪಿಯನ್ನು ವಿಚಾರಣೆಗೆ ಒಳಪಡಿಸಿದಾಗ ಹುಲಿ ಉಗುರನ್ನು ತನಗೆ ಮೂಡಿಗೆರೆ ತಾಲೂಕಿನ ಹುಲ್ಲೇ ಮನೆ ಕುಂದೂರು ನಿವಾಸಿ ರಂಜಿತ್ ನೀಡಿದ್ದು ಎಂದು ಮಾಹಿತಿ ನೀಡಿದ್ದನು. ನಂತರ ರಂಜಿತ್‌ನನ್ನು ಹುಲ್ಲೇ ಮನೆಯ ನಿವಾಸದಲ್ಲಿ ಅರಣ್ಯ ಅಧಿಕಾರಿಗಳು ವಶಕ್ಕೆ ಪಡೆದಿದ್ದರು.
ವ್ಯಕ್ತಿಯೊಬ್ಬರು ದೂರು ನೀಡಿದ ಆಧಾರದ ಮೇರೆಗೆ ರಾಜರಾಜೇಶ್ವರಿ ನಗರದ ಬಳಿ ರಿಯಾಲಿಟಿ ಶೋ ನಡೆಯುತ್ತಿದ್ದ ಬಿಗ್‌ಬಾಸ್ ಮನೆಗೆ ಭಾನುವಾರ ರಾತ್ರಿ ತೆರಳಿದ್ದ ಅರಣ್ಯಾಧಿಕಾರಿಗಳು ಸಂತೋಷ್ ಅವರನ್ನು ವಶಕ್ಕೆ ಪಡೆದಿದ್ದರು. ಸದ್ಯ ವರ್ತೂರು ಸಂತೋಷ್ನನ್ನು ಅರಣ್ಯಾಧಿಕಾರಿಗಳು ಬಂಧಿಸಿ ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಿದ್ದಾರೆ. ವರ್ತೂರು ಸಂತೋಷ್ ಬಂಧನದ ಬೆನ್ನಲ್ಲೇ ರಾಜ್ಯಾದ್ಯಂತ ಅರಣ್ಯ ಇಲಾಖೆ ಹುಲಿ ಉಗುರು ಧರಿಸಿದವರ ಮೇಲೆ ಕ್ರಮ ಕೈಗೊಳ್ಳಲು ಸಜ್ಜಾಗಿದೆ.













