ರಿಪ್ಪನ್‌ಪೇಟೆ: (ನ್ಯೂಸ್ ಮಲ್ನಾಡ್ ವರದಿ) ಟ್ಯೂಷನ್ ಮುಗಿಸಿ ಬರುವಾಗ ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ವಿದ್ಯಾರ್ಥಿ ಮೃತಪಟ್ಟ ಘಟನೆ ಶುಕ್ರವಾರ ನಡೆದಿದೆ. ಪಟ್ಟಣದ ಮದೀನ ಕಾಲನಿಯ ಮಹಮ್ಮದ್ ತಮೀಮ್(16) ಮೃತ ದುರ್ದೈವಿ.
ಇದನ್ನೂ ಓದಿ: ಆಸ್ತಿ ನೋಂದಣಿ ನಿಯಮಗಳಲ್ಲಿ ಮಹತ್ವದ ಬದಲಾವಣೆ; ಇನ್ಮುಂದೆ ಆಸ್ತಿ ರಿಜಿಸ್ಟ್ರೇಷನ್ ಗೆ ಈ ದಾಖಲೆಗಳು ಕಡ್ಡಾಯ!

ಚೌಡೇಶ್ವರಿ ಬೀದಿಯಲ್ಲಿ ಟ್ಯೂಷನ್‌ಗೆ ತೆರಳಿದ್ದ ಆತ, ಬಳಿಕ ಸ್ನೇಹಿತರೊಂದಿಗೆ ಬರುವೆ ಗ್ರಾಮದ ದಿಬ್ಬದತ್ತ ತೆರಳಿದ್ದಾನೆ. ಈ ವೇಳೆ ಗದ್ದೆಯೊಳಗಿನ ಕೆರೆಯ ಮೇಲೆ ನಡೆಯುತ್ತಿದ್ದಾಗ ಕಾಲುಜಾರಿ ನೀರಿಗೆ ಬಿದ್ದು ದುರ್ಘಟನೆ ಸಂಭವಿಸಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ನಂತರ ಸ್ಥಳೀಯರು ಯುವಕನನ್ನು ರಿಪ್ಪನ್ ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತಂದು ದಾಖಲಿಸಿದ್ದಾರೆ ಅಷ್ಟರಲ್ಲಾಗಲೇ ಯುವಕ ಮೃತಪಟ್ಟಿದ್ದಾನೆ ಎಂದು ವೈದ್ಯರು ಧೃಡಪಡಿಸಿದ್ದಾರೆ.
ಇದನ್ನೂ ಓದಿ: 6 ರಾಶಿಗೆ ಪ್ರಗತಿಯ ಹಾದಿ ತೆರೆಯಲಿದೆ.. ಭರ್ಜರಿ ಲಕ್!
ಮೃತ ವಿದ್ಯಾರ್ಥಿ ಪಟ್ಟಣದ ಖಾಸಗಿ ವಿದ್ಯಾಸಂಸ್ಥೆಯಲ್ಲಿ ಎಸ್‌ಎಸ್‌ಎಲ್‌ಸಿ ವ್ಯಾಸಂಗ ಮಾಡುತ್ತಿದ್ದು, ಮೂರು ಪಬ್ಲಿಕ್ ಪರೀಕ್ಷೆಗಳನ್ನೂ ಬರೆದಿದ್ದನು. ಈ ಕುರಿತು ರಿಪ್ಪನ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
















