
ಶಿವಮೊಗ್ಗ: (ನ್ಯೂಸ್ ಮಲ್ನಾಡ್ ವರದಿ) ಪ್ರತಿಷ್ಠಿತ ಕಾಲೇಜಿನ ಸಿಬ್ಬಂದಿಯೊಬ್ಬರು ಕಾಲೇಜಿನ ಪ್ರಯೋಗಾಲಯದಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಪೆಸಿಟ್ ಕಾಲೇಜಿನಲ್ಲಿ ಲ್ಯಾಬ್ ಇನ್‌ಸ್ಟ್ರಕ್ಟರ್ ಆಗಿ ಕೆಲಸ ಮಾಡುತ್ತಿದ್ದ ಧ್ರುವಕುಮಾರ್ (47) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡು ಸಿಬ್ಬಂದಿ.
ಇದನ್ನೂ ಓದಿ: ಫಿಶ್ ಪ್ರಿಯರೇ ಎಚ್ಚರ…!; ಈ ಮೀನುಗಳನ್ನು ತಿಂದ್ರೆ ಆರೋಗ್ಯಕ್ಕಿದೆ ಕುತ್ತು!

ಮೂಲತಃ ಚನ್ನಗಿರಿ ತಾಲೂಕಿನ ಬೊಮ್ಮೇನಹಳ್ಳಿಯ ಇವರು ಆಯನೂರಿನಲ್ಲಿ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿದ್ದರು. ಎರಡು ತಿಂಗಳ ಹಿಂದೆಯೂ ಅವರು ಆತ್ಮಹತ್ಯೆಗೆ ಪ್ರಯತ್ನ ಮಾಡಿದ್ದರು ಎನ್ನಲಾಗುತ್ತಿದೆ. ವೈಯಕ್ತಿಕ ಸಮಸ್ಯೆಯಿಂದ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಮಾತುಗಳೂ ಕೇಳಿಬರುತ್ತಿವೆ.

ಇದನ್ನೂ ಓದಿ: ಅನಧಿಕೃತ ಪಂಪ್ಸೆಟ್ ಹೊಂದಿದ್ರೆ ಈ ಸುದ್ದಿ ಓದಿ; ಕಾನೂನು ಕ್ರಮ ಫಿಕ್ಸ್!, ಯಾಕೆ ಗೊತ್ತಾ?
ಪೊಲೀಸರ ತನಿಖೆಯಿಂದ ವಾಸ್ತವ ಸಂಗತಿ ತಿಳಿಯಬೇಕಿದೆ.













