
ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಸಿಇಟಿ ಪರೀಕ್ಷೆ ವೇಳೆ ವಸ್ತ್ರ ಸಂಹಿತೆ ಕಡ್ಡಾಯ ಹಿನ್ನೆಲೆಯಲ್ಲಿ ಕಳೆದ ಬಾರಿ ತಾಳಿ, ಜನಿವಾರ ಸಂಬಂಧ ಗೊಂದಲ ಉಂಟಾಗಿ, ಭಾರೀ ಸುದ್ದಿಯಾಗಿತ್ತು. ಇದೀಗ ಗುರುವಾರ ನಡೆದ ಸಿಇಟಿ ಪರೀಕ್ಷೆ ವೇಳೆ ನಗರದ ಪರೀಕ್ಷಾ ಕೇಂದ್ರವೊಂದಕ್ಕೆ ಮೂಗುತಿ ಧರಿಸಿ ಬಂದ ವಿದ್ಯಾರ್ಥಿನಿಯರ ಮೂಗಿಗೆ ಪರೀಕ್ಷಾ ಕೇಂದ್ರದ ಸಿಬ್ಬಂದಿ ಗಮ್ ಟೇಪ್ ಹಾಕಿ ಪರೀಕ್ಷೆ ಬರೆಯುವುದಕ್ಕೆ ಅವಕಾಶ ನೀಡಿದ ಘಟನೆ ನಡೆದಿದೆ.
ನಗರದಲ್ಲಿ ಗುರುವಾರ ನಡೆದ ಸಿಇಟಿ ಪರೀಕ್ಷೆಗೆ ಬಂದ ಅಭ್ಯರ್ಥಿಗಳು ಲೋಹದ ವಸ್ತುಗಳನ್ನು ಧರಿಸಿ ಪರೀಕ್ಷಾ ಕೇಂದ್ರ ಪ್ರವೇಶಿಸುವಂತಿರಲಿಲ್ಲ. ಆದರೆ, ಮೂಗುತಿ ಧರಿಸಿದ ವಿದ್ಯಾರ್ಥಿನಿಯರಿಗೆ ಅವಕಾಶ ನೀಡುವಂತೆ ಮೇಲಧಿಕಾರಿಗಳು ತಿಳಿಸಿದ್ದರು.

ಈ ಹಿನ್ನೆಲೆಯಲ್ಲಿ ನಗರದ ಪರೀಕ್ಷಾ ಕೇಂದ್ರ ಪ್ರವೇಶಿಸಿದ ವಿದ್ಯಾರ್ಥಿನಿಯರು ಮೂಗುತಿ ಧರಿಸಿದ್ದರೆ, ಅವರ ಮೂಗಿಗೆ ಗಮ್ ಟೇಪ್ ಹಾಕಿ ಪರೀಕ್ಷೆ ಬರೆಯುವುದಕ್ಕೆ ಅವಕಾಶ ನೀಡಿದ ಘಟನೆ ನಡೆದಿದೆ.















