ಗೃಹಲಕ್ಷ್ಮಿ ಯೋಜನೆಗೆ ಹಣ ಹೊಂದಿಸಲು ರಾಜ್ಯ ಸರ್ಕಾರ ಬಿಪಿಎಲ್‌ ಕಾರ್ಡ್ ರದ್ದು: ಕೋಟಾ

ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಯಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಗೆ ಹಣ ಹೊಂದಿಸಲು ಕಾಂಗ್ರೆಸ್ ಸರ್ಕಾರ ಪರದಾಡುತ್ತಿದೆ. ಹೀಗಾಗಿ ಬಿಪಿಎಲ್ ರೇಷನ್ ಕಾರ್ಡ್ಗಳನ್ನು ರದ್ದುಗೊಳಿಸುವ ಹುನ್ನಾರ ನಡೆಸಿದೆ ಇದನ್ನು ಬಿಜೆಪಿ ಕಾರ್ಯಕರ್ತರು ಪ್ರತಿಭಟಿಸಿ ಜಿಲ್ಲಾಧಿಕಾರಿಗೆ ದೂರು ಸಲ್ಲಿಸಬೇಕು ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಕರೆ ನೀಡಿದ್ದಾರೆ.


ಇದನ್ನೂ ಓದಿ; ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್;  SBI ಯಿಂದ ಸಿಗಲಿದೆ 15,000;  ಹೇಗೆ?, ಯಾರು ಅರ್ಹರು, ಇಲ್ಲಿದೆ ನೋಡಿ


ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನ ಸಂಬಂಧ ಪ್ರಮುಖರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಚಿಕ್ಕಮಗಳೂರು ಜಿಲ್ಲೆಯಲ್ಲಿ ಸುಮಾರು 50,000 ಬಿಪಿಎಲ್ ರೇಷನ್ ಕಾರ್ಡುಗಳು ರದ್ದಾಗುವ ಸಾಧ್ಯತೆಗಳಿವೆ. ಸಾವಿರಾರು ಬಡ ಜನರಿಗೆ ತೊಂದರೆ ಉಂಟಾಗುತ್ತದೆ. ಈ ಹಿನ್ನೆಲೆಯಲ್ಲಿ ಪಕ್ಷದ ಮಹಿಳಾ ಮೋರ್ಚ ಅಥವಾ ಬೇರೆ ಯಾವುದಾದರೂ ಘಟಕದಿಂದ ಜಿಲ್ಲಾಧಿಕಾರಿಗೆ ದೂರು ಸಲ್ಲಿಸಿ ಬಡವರ ಪಡಿತರ ಚೀಟಿಗಳನ್ನು ರದ್ದುಪಡಿಸಿದರೆ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಬೇಕು. ಇದರಿಂದ ಕನಿಷ್ಠಪಕ್ಷ ಬಿಪಿಎಲ್ ರೇಷನ್ ಕಾರ್ಡುಗಳಿಗೆ ಸ್ವಲ್ಪಮಟ್ಟಿನ ರಿಯಾಯಿತಿಯಾದರೂ ಸಿಗಬಹುದು. ಬಡವರಿಗೆ ಅನುಕೂಲವಾಗಬಹುದು ಎಂದರು.


ಇದನ್ನೂ ಓದಿ;  ವಾಹನ ಚಾಲನೆ ವೇಳೆ ಈ ದಾಖಲೆಗಳನ್ನು ಇಟ್ಟುಕೊಳ್ಳುವುದು ಕಡ್ಡಾಯ!; ಯಾವುದೆಲ್ಲಾ? ಇಲ್ಲಿದೆ ನೋಡಿ


ಈ ಹಿಂದೆ ಸಂಸದರ ಗಮನಕ್ಕೆ ತಂದಿದ್ದ ಗ್ರಾಮ ಭಾರತ್ ವೇದಿಕೆ ಸದಸ್ಯರು:
ಕೋಟಾ ಶ್ರೀನಿವಾಸ ಪೂಜಾರಿ ಅವರು ಶೃಂಗೇರಿ ತಾಲ್ಲೂಕಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಗ್ರಾಮ ಭಾರತ್ ವೇದಿಕೆ ಸದಸ್ಯರು ಬಿಪಿಎಲ್ ರೇಷನ್ ಕಾರ್ಡ್ಗಳ ರದ್ದತಿ ಕುರಿತು ಸಂಸದರ ಗಮನಕ್ಕೆ ತಂದಿದ್ದರು.


ಇದನ್ನೂ ಓದಿ;  ರೇಷನ್ ಕಾರ್ಡ್, ಗೃಹಲಕ್ಷ್ಮಿ ಹಣ ಕ್ಯಾನ್ಸಲ್?


 

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.