ಚಿಕ್ಕಮಗಳೂರಿನ ರೆಸಾರ್ಟ್ ನಲ್ಲಿ HDK ವಾಸ್ತವ್ಯ

ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಕಾಫಿನಾಡು ಚಿಕ್ಕಮಗಳೂರಿನ ರೆಸಾರ್ಟ್ ನಲ್ಲಿ ಜೆಡಿಎಸ್ ಶಾಸಕರು ಮತ್ತು ಹೆಚ್.ಡಿ ಕುಮಾರಸ್ವಾಮಿ ವಾಸ್ತವ್ಯ ಹೂಡಲಿದ್ದಾರೆ.

 

ಇದನ್ನೂ ಓದಿ; ವಯನಾಡಿನಲ್ಲಿ ನಕ್ಸಲರು ಪೊಲೀಸರ ನಡುವೆ ಫೈರಿಂಗ್; ಮಲೆನಾಡಿನ ಈ ಜಿಲ್ಲೆಯಲ್ಲಿ ಹೈ ಅಲರ್ಟ್

ಜೆಡಿಎಸ್ ನ ವಿಧಾನ ಪರಿಷತ್ ಸದಸ್ಯ ಎಸ್ ಎಲ್ ಭೋಜೇಗೌಡ ಅವರ ಮಗಳ ಮದುವೆಯ ನಿಶ್ಚಿತಾರ್ಥ ಕಾರ್ಯಕ್ರಮ ನವೆಂಬರ್ 19 ರಂದು ನಿಗದಿಯಾಗಿದೆ. ಇದರಲ್ಲಿ ಪಾಲ್ಗೊಳ್ಳುವ ನೆಪದಲ್ಲಿ ತಮ್ಮ ಪಕ್ಷದ ಶಾಸಕರನ್ನು ಕುಮಾರಸ್ವಾಮಿ ಚಿಕ್ಕಮಗಳೂರಿಗೆ ಕರೆದೊಯ್ಯುತ್ತಿದ್ದಾರೆ.

 

ಇದನ್ನೂ ಓದಿ; ಚಿನ್ನ ಮತ್ತು ಬೆಳ್ಳಿ ಎರಡೂ ಮತ್ತಷ್ಟು ಅಗ್ಗ; ಇವತ್ತಿನ ದರವೆಷ್ಟು, ಇಲ್ಲಿದೆ ವಿವರ

ಚಿಕ್ಕಮಗಳೂರಿನ ರೆಸಾರ್ಟ್ ನಲ್ಲಿ ಮೂರು ದಿನಗಳ ಕಾಲ ಕುಮಾರಸ್ವಾಮಿ ಸೇರಿದಂತೆ ಜೆಡಿಎಸ್ ಶಾಸಕರು ವಾಸ್ತವ್ಯ ಹೂಡಲಿದ್ದಾರೆ. ನವೆಂಬರ್ 17 ರ ಮಧ್ಯಾಹ್ನ ಚಿಕ್ಕಮಗಳೂರಿನ ಖಾಸಗಿ ರೆಸಾರ್ಟ್ ಗೆ ಶಾಸಕರು ಆಗಮಿಸಲಿದ್ದಾರೆ. ನವೆಂಬರ್ 18 ರಂದು ಶಾಸಕ ಜೊತೆ ಕುಮಾರಸ್ವಾಮಿ ಸಭೆ ನಡೆಸಲಿದ್ದಾರೆ. ನ.19 ರಂದು ಸಿಲ್ವರ್ ಗೇಟ್ ರೆಸಾರ್ಟ್ ನಲ್ಲಿ ನಡೆಯುವ ಶಾಸಕ ಭೋಜೇಗೌಡ ಅವರ ಮಗಳ ಮದುವೆ ನಿಶ್ಚಿತಾರ್ಥ ಕಾರ್ಯಕ್ರಮದಲ್ಲಿ ಶಾಸಕರು ಭಾಗಿಯಾಗಲಿದ್ದಾರೆ ಎನ್ನಲಾಗಿದೆ.

 

ಹೆಚ್.ಡಿ.ಕೆ ದತ್ತಮಾಲೆ ಧಾರಣೆ ಮಾಡುವ ಸಾಧ್ಯತೆ:
ಬದಲಾದ ರಾಜಕೀಯ ಪರಿಸ್ಥಿತಿಯಲ್ಲಿ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರು ಹಿಂದುತ್ವದ ಅಜೆಂಡಾ ಕಡೆಗೆ ಮುಖ ಮಾಡಲಿದ್ದಾರೆ ಎನ್ನಲಾಗಿದೆ. ಮುಂದಿನ ಡಿಸೆಂಬರ್ ತಿಂಗಳಲ್ಲಿ ಹೆಚ್‌ಡಿಕೆ ದತ್ತಮಾಲೆ ಧಾರಣೆ ಮಾಡುವ ಸಾಧ್ಯತೆ ಇದೆ ಎಂಬ ಮಾಹಿತಿ ಲಭ್ಯವಾಗಿದೆ.

ಈಗಾಗಲೇ ಹಿಂದುತ್ವದ ಕಡೆ ವಾಲಿರುವ ಜಾತ್ಯಾತೀತ ಜನತಾ ದಳ ಮತ್ತಷ್ಟು ಪ್ರಬಲ ಹಿಂದುತ್ವದ ಅಜೆಂಡಾ ಕಡೆ ಮುಖ ಮಾಡಲು ಮುಂದಾಗಿದೆ. ಮುಂದಿನ ಡಿಸೆಂಬರ್ ನಲ್ಲಿ ಕುಮಾರಸ್ವಾಮಿ ಅವರು ದತ್ತಮಾಲೆ ಸ್ವೀಕರಿಸುವ ಸಾಧ್ಯತೆ ಇದೆ. ಚಿಕ್ಕಮಗಳೂರು ಜೆಡಿಎಸ್ ಮುಖಂಡರ ಜೊತೆ ಈ ಕುರಿತು ಮಾಜಿ ಸಿಎಂ ಮಾತುಕತೆ ನಡೆಸಿದ್ದಾರೆ. ಅವಶ್ಯಕತೆ ಬಿದ್ದರೆ ದತ್ತಮಾಲೆ ಧಾರಣೆ ಮಾಡುವುದಾಗಿ ಒಪ್ಪಿಗೆ ಸೂಚಿಸಿದ್ದಾರೆ ಎನ್ನಲಾಗಿದೆ. ದತ್ತಾತ್ರೇಯ ಪೀಠದಲ್ಲಿ ಕುಮಾರಸ್ವಾಮಿ ಅವರ ದತ್ತಮಾಲೆ ಧಾರಣೆಗೆ ಚಿಕ್ಕಮಗಳೂರು ಜೆಡಿಎಸ್ ಘಟಕ ಈಗಾಗಲೇ ಒಂದು ಸುತ್ತಿನ ಮಾತುಕತೆ ನಡೆಸಿದೆ ಎನ್ನಲಾಗಿದೆ.

 

ಮೂಡಿಗೆರೆ: ನಾಲ್ಕು ಕಡೆ ಪ್ರತ್ಯೇಕ ಅಪಘಾತ, ಮೂವರು ಗಂಭೀರ

ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಹಬ್ಬದಂದೆ ಪ್ರತ್ಯೇಕ ನಾಲ್ಕು ಕಡೆ ಅಪಘಾತಗಳು ಸಂಭವಿಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ನಡೆದಿದೆ.

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು:
ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಕೆರೆಕಟ್ಟೆ ಸಮೀಪ ಕಾರು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರಿನ ಮಂಭಾಗ ನಜ್ಜುಗುಜ್ಜಾಗಿದೆ. ಕಾರು ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು:
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಪಲ್ಗುಣಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್ ಕಾರು ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ಇದನ್ನೂ ಓದಿ; ನಿಮ್ಹಾನ್ಸ್‌ ನಲ್ಲಿ ವಾಕ್ ಇನ್ ಇಂಟರ್ವ್ಯೂ; 32 ನರ್ಸಿಂಗ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಸ್ಕೂಟರ್ ಪಲ್ಟಿ, ಚಾಲಕನಿಗೆ ಗಂಭೀರ ಗಾಯ:
ಸ್ಕೂಟರ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಕೈ ಹಾಗೂ ಕಾಲುಮೂಳೆ ಕಟ್ಟಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯ ಪಲ್ಗುಣಿ ರಾಷ್ಟ್ರೀಯ ಹೆದ್ದಾರಿ ತಿರುವಿನಲ್ಲಿ ನಡೆದಿದೆ. ಸ್ಕೂಟರ್ ಸವಾರ ಸಕಲೇಶಪುರ ಮೂಲದವರು ಎನ್ನಲಾಗಿದ್ದು, ಹಾಸನ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಎರಡು ಅಪಘಾತಗಳು ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಇದನ್ನೂ ಓದಿ; ಅಂಚೆ ಇಲಾಖೆಯಲ್ಲಿ ಭರ್ಜರಿ ಉದ್ಯೋಗಾವಕಾಶ; 1899 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ; ಯಾವ ಹುದ್ದೆ…ಇಲ್ಲಿದೆ ಮಾಹಿತಿ

ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ:
ಮೂಡಿಗೆರೆ ತಾಲ್ಲೂಕಿನ ಅಣಜೂರು ಬಳಿ ಎರಡು ವಾಹನಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಪರಿಣಾಮ ಎರಡು ವಾಹನದಲ್ಲಿ ಇಬ್ಬರಿಗೆ ಹೆಚ್ಚು ಪೆಟ್ಟಾಗಿದ್ದು, ಒಬ್ಬರನ್ನು ಮಂಗಳೂರು ಆಸ್ಪತ್ರೆ ಹಾಗೂ ಮತ್ತೊಬ್ಬರಿಗೆ ಬೆಂಗಳೂರು ಆಸ್ಪತ್ರೆಗೆ ರವಾನಿಸಲಾಗಿದೆ. ಒಟ್ಟು ಮೂರು ಅಪಘಾತಗಳು ಮೂಡಿಗೆರೆ ತಾಲೂಕಿನಲ್ಲಿ ನಡೆದಿದೆ.

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.