ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ವಿದ್ಯಾರ್ಥಿನಿಯನ್ನು ಬ್ಲಾಕ್ಮೇಲ್ ಮಾಡಿ ಅತ್ಯಾಚಾರಕ್ಕೆ ಯತ್ನಿಸಿದ ಆರೋಪದಲ್ಲಿ ಐವರ ವಿರುದ್ಧ ಗೋಣಿಬೀಡು ಠಾಣೆಯಲ್ಲಿ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.
ಪದವಿ ಪೂರ್ವ ಕಾಲೇಜಿಗೆ ತೆರಳುತ್ತಿದ್ದ ವಿದ್ಯಾರ್ಥಿನಿಯನ್ನು ಪುಸಲಾಯಿಸಿ ಅತ್ಯಾಚಾರ ನಡೆಸಿದ ಆರೋಪದಲ್ಲಿ ಬೇಲೂರಿನ ಯುವಕನನ್ನು ಕೆಲ ತಿಂಗಳ ಹಿಂದೆಯೇ ಬಂಧಿಸಿ ಪೊಲೀಸರು ಜೈಲಿಗೆ ಕಳುಹಿಸಿದ್ದರು.

ಯುವಕ ಹಾಗೂ ವಿದ್ಯಾರ್ಥಿನಿಯ ಫೋಟೊ ಮೊಬೈಲ್ ಫೋನಿನಲ್ಲಿ ಇಟ್ಟುಕೊಂಡಿದ್ದ ಯುವಕರು ಬ್ಲಾಕ್ ಮೇಲ್ ಮಾಡುತ್ತಿದ್ದರು ಎಂದು ವಿದ್ಯಾರ್ಥಿನಿ ನೀಡಿದ್ದ ದೂರು ಆಧರಿಸಿ ಐವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿ. ನಾಲ್ವರನ್ನು ಬಂಧಿಸಿದ್ದಾರೆ.












