ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿನಿಯೊಬ್ಬರು ಪ್ರಾಧ್ಯಾಪಕರೊಬ್ಬರ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿದ್ದು, ಈ ಸಂಬಂಧ ಪ್ರೊಫೆಸರ್ ಗೆ ಶೋಕಾಸ್ ನೋಟಿಸ್ ಜಾರಿಗೊಳಿಸಿದ್ದಾರೆ.
ಇದನ್ನೂ ಓದಿ: ಪಿಎಂ-ಕಿಸಾನ್ 21ನೇ ಕಂತು ಬಿಡುಗಡೆ ಮಾಡಿದ ಪ್ರಧಾನಿ ಮೋದಿ: 9 ಕೋಟಿ ರೈತರಿಗೆ ಒಟ್ಟು 18,000 ಕೋಟಿ ರೂ. ಹಣ ಸಂದಾಯ

ಚಿಕ್ಕಮಗಳೂರು ಮೆಡಿಕಲ್ ಕಾಲೇಜು ಅನಾಟಮಿ ಪ್ರೊಫೆಸರ್ ಗಂಗಾಧರ್ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ. ಬೆಂಗಳೂರು ಮೂಲದ ಮೂರನೇ ಸೆಮಿಸ್ಟರ್ನ ವೈದ್ಯಕೀಯ ವಿದ್ಯಾರ್ಥಿನಿಗೆ ವಾಟ್ಸ್ಆ್ಯಪ್ ಮೂಲಕ ಅಶ್ಲೀಲ ಸಂದೇಶಗಳನ್ನು ಕಳುಹಿಸಿದ್ದಲ್ಲದೆ, ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ಇದೀಗ ಚಿಕ್ಕಮಗಳೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಡೀನ್ ಹಾಗೂ ನಿರ್ದೇಶಕ ಹರೀಶ್ ಪ್ರೊಫೆಸರ್ ಗಂಗಾಧರ್ಗೆ ಶೋಕಾಸ್ ನೋಟಿಸ್ ಜಾರಿಗೊಳಿಸಿದ್ದಾರೆ.
ನೋಟಿಸ್ನಲ್ಲೇನಿದೆ?:
ಸಂತ್ರಸ್ತೆಯು ಇನ್ಸ್ಟಾಗ್ರಾಂ ಹಾಗೂ ಯೂಟ್ಯೂಬ್ನಲ್ಲಿ ನೀಡಿರುವ ಸಂದರ್ಶನದಲ್ಲಿ, ಡಾ.ಗಂಗಾಧರ ಅವರು ವಾಟ್ಸ್ಆ್ಯಪ್ ಚಾಟ್ ಮೂಲಕ ಅಶ್ಲೀಲ ಸಂದೇಶಗಳನ್ನು ಕಳುಹಿಸಿರುವ ಬಗ್ಗೆ ಆರೋಪಿಸಿರುತ್ತಾರೆ. ಕುರಿತು ಲಿಖಿತ ಸಮಜಾಯಿಷಿ ನೀಡಬಬೇಕು ಎಂದು ಶೋಕಾಸ್ ನೋಟಿಸ್ನಲ್ಲಿ ಸೂಚನೆ ನೀಡಲಾಗಿದೆ.
ಇದನ್ನೂ ಓದಿ: ಆಲದ ಮರದ ನೆರಳಿನಲ್ಲಿ ಶುರುವಾದ ಭಾರತೀಯ ಸ್ಟಾಕ್ ಮಾರ್ಕೆಟ್ – ಇಂದು 400 ಲಕ್ಷ ಕೋಟಿಯ ಮೌಲ್ಯ!
ಸಾಮಾಜಿಕ ಜಾಲತಾಣಗಳಾದ ಇನ್ಸ್ಟಾಗ್ರಾಂ ಹಾಗೂ ಯೂಟ್ಯೂಬ್ನಲ್ಲಿ ಸಂತ್ರಸ್ತೆಯು ನೀಡಿರುವ ಸಂದರ್ಶನದಲ್ಲಿ ನೀವು ವಿದ್ಯಾರ್ಥಿನಿಯೊಡನೆ ಅನುಚಿತ ವಾಟ್ಸ್ಆ್ಯಪ್ ಚಾಟ್ ನಡೆಸಿರುವ ಬಗ್ಗೆ ಹೇಳಿಕೆ ನೀಡಿರುವುದು ಸಾಮಾಜಿಕ ಜಾಲತಾಣದಲ್ಲಿ ದಿನಾಂಕ 23-11-2025 ರಿಂದ ಹರಿದಾಡುತ್ತಿರುತ್ತದೆ. ಈ ವಾಟ್ಸ್ಆ್ಯಪ್ ಚಾಟ್ ಕುರಿತಂತೆ ತಮ್ಮ ಬಗ್ಗೆ ನೀಡಿರುವ ಹೇಳಿಕೆಗಳ ಕುರಿತು ಈ ನೋಟೀಸ್ ತಲುಪಿದ ಕೂಡಲೇ ಲಿಖಿತ ಸಮಜಾಯಿಷಿಯನ್ನು ನೀಡಲು ಸೂಚಿಸಿದೆ. ತಪ್ಪಿದ್ದಲ್ಲಿ ತಮ್ಮ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಮೇಲಾಧಿಕಾರಿಗಳಿಗೆ ಶಿಫಾರಸ್ಸು ಮಾಡಲಾಗುವುದು ಎಂದು ಗಂಗಾಧರ್ ಅವರಿಗೆ ನೀಡಿದ ನೋಟಿಸ್ನಲ್ಲಿ ಡೀನ್ ಉಲ್ಲೇಖಿಸಿದ್ದಾರೆ.












