ಕೊಪ್ಪ: (ನ್ಯೂಸ್ ಮಲ್ನಾಡ್ ವರದಿ) ವಿದ್ಯಾರ್ಥಿನಿಯೊಬ್ಬಳು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಮಾಕೋಡು ಮೇಳ್ ಬಿಳ್ರೆಡೆಯಲ್ಲಿ ನಡೆದಿದೆ. ನವ್ಯತಾ (17) ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ.
ಇದನ್ನೂ ಓದಿ: ಚಿಕ್ಕಮಗಳೂರು ಜಿಲ್ಲೆಯಲ್ಲಿ 12,991 BPL ಕಾರ್ಡ್ ರದ್ದು; ನಿಮ್ಮ ತಾಲೂಕಿನ ರೇಷನ್ ಕಾರ್ಡ್ ಡಿಲೀಟ್ ಆದ ಡಿಟೈಲ್ಸ್ ಇಲ್ಲಿದೆʼ

ಹರಿಹರಪುರ ಪದವಿ ಪೂರ್ವ ಕಾಲೇಜಿನಲ್ಲಿ ವಾಣಿಜ್ಯಶಾಸ್ತ್ರ ವ್ಯಾಸಂಗ ಮಾಡುತ್ತಿದ್ದ ನವ್ಯತಾ ಮಂಗಳವಾರ ಕಾಲೇಜಿಗೆ ಹೋಗಿರಲಿಲ್ಲ ಎನ್ನಲಾಗಿದ್ದು, ಡೆತ್ ನೋಟ್ ನಲ್ಲಿ ಮಿಸ್ ಯೂ ಅಪ್ಪ ಅಮ್ಮ ಎಂದು ಬರೆದಿದ್ದಾಳೆ ಎಂದು ತಿಳಿದು ಬಂದಿದೆ.
ಈ ಕುರಿತು ನವ್ಯತಾ ತಂದೆ ಹರಿಹರಪುರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಇದನ್ನೂ ಓದಿ: ಮೊಟ್ಟೆ ತಿಂದ್ರೆ ಕ್ಯಾನ್ಸರ್ ಬರುತ್ತಾ?; FSSAI ವರದಿ ಇಲ್ಲಿದೆ ನೋಡಿ












