ಬೆಂಗಳೂರು/ಹಾಸನ: (ನ್ಯೂಸ್ ಮಲ್ನಾಡ್ ವರದಿ) ಇಲ್ಲಿನ ಹೊರವಲಯ ಹೆಸರುಘಟ್ಟ ರಸ್ತೆಯ ಕಾಲೇಜೊಂದರ ವಿದ್ಯಾರ್ಥಿನಿ ನೇಣುಬಿಗಿದುಕೊಂಡು ಆತ್ಮಹತ್ಯೆ ಶರಣಾಗಿರುವ ಘಟನೆ ನಡೆದಿದೆ. ಹಾಸನ ಮೂಲದ ಯುವತಿ ವತ್ಸಲ (19) ಖಾಸಗಿ ಕಾಲೇಜಿನಲ್ಲಿ ಬಿ ಫಾರ್ಮ್ ಫೈನಲ್ ಇಯರ್ ವ್ಯಾಸಂಗ ಮಾಡುತ್ತಿದ್ದಳು. ಪಿಜಿಯಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣಾಗಿದ್ದಾಳೆ.
ಇದನ್ನೂ ಓದಿ: ಆಧಾರ್ & ರೇಷನ್ ಕಾರ್ಡ್ ಇದ್ರೆ ಉಚಿತ ತರಬೇತಿಗೆ ಅರ್ಜಿ ಸಲ್ಲಿಸಿ

ಗರ್ಲ್ಸ್ ಪಿಜಿಯಲ್ಲಿದ್ದ ಯುವತಿ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಆಕೆಯ ಸ್ನೇಹಿತರು ಹಾಗೂ ಮೊಬೈಲ್ ಫೋನ್ ಪರಿಶೀಲನೆ ನಡೆಸುತ್ತಿದ್ದಾರೆ.
ಘಟನೆ ಸಂಬಂಧ ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ವಿದ್ಯಾಸಿರಿ ಸೇರಿ ವಿವಿಧ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ












