
ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಕಾಮೇನಹಳ್ಳಿ ಫಾಲ್ಸ್ ನಲ್ಲಿ ಬಿದ್ದು ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಕಾಮೇನಹಳ್ಳಿ ಫಾಲ್ಸ್ ನಲ್ಲಿ ನಡೆದಿದೆ. ಪಾಲಿಟೆಕ್ನಿಕ್ ಕಾಲೇಜು ವಿದ್ಯಾರ್ಥಿ ಚೇತನ್ (18) ಮೃತ ವಿದ್ಯಾರ್ಥಿ.
ಇದನ್ನೂ ಓದಿ: ಅಕ್ರಮ ಪಂಪ್ ಸೆಟ್ ಹೊಂದಿರುವವರಿಗೆ ಇಂಧನ ಸಚಿವ ಕೊಟ್ರು ಸಿಹಿಸುದ್ದಿ; ಮಿಸ್ ಮಾಡ್ದೆ ಈ ಸುದ್ದಿ ಓದಿ

ಚಿಕ್ಕಮಗಳೂರು ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಓದುತ್ತಿದ್ದ ಚೇತನ್ ಶಿಕ್ಷಕರ ಗೈರು ಹಿನ್ನೆಲೆ ತರಗತಿಗೆ ರಜೆ ಇದ್ದ ಕಾರಣ ಸ್ನೇಹಿತರ ಜೊತೆ ಫಾಲ್ಸ್ ಗೆ ತೆರಳಿದ್ದ. ಕಲ್ಲು ಬಂಡೆಯ ಮೇಲಿನಿಂದ ನೀರಿಗೆ ಹಾರಿದ ವೇಳೆ ಬಂಡೆಗೆ ತಲೆ ಬಡಿದು ಸಾವನ್ನಪ್ಪಿದ್ದಾನೆ.

ಇದನ್ನೂ ಓದಿ: ಬೋರ್ವೆಲ್ ಕೊರೆಸಲು ಅರ್ಜಿ ಆಹ್ವಾನ!; ಶೇ.90 ರಂತೆ ಸಹಾಯಧನ
ಅಗ್ನಿಶಾಮಕ ದಳದ ಸಿಬ್ಬಂದಿ ಫಾಲ್ಸ್ ನಿಂದ ಚೇತನ್ ಮೃತ ದೇಹ ಹೊರತೆಗೆದಿದ್ದು, ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇದನ್ನೂ ಓದಿ: ಪೋಸ್ಟ್ ಆಫೀಸ್ ನಲ್ಲಿ ಜಾಬ್ ಆಫರ್; 10th ವಿದ್ಯಾರ್ಹತೆ, 21,413 ಹುದ್ದೆ; ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿದೆ ನೋಡಿ













