ಬಾಳೆಹೊನ್ನೂರು: (ನ್ಯೂಸ್ ಮಲ್ನಾಡ್ ವರದಿ) ಸಮೀಪದ ಕರ್ಕೇಶ್ವರ ಗ್ರಾಪಂ ವ್ಯಾಪ್ತಿಯ ಮೇಲ್ಪಾಲ್‌ನ ರಸ್ತೆಯಲ್ಲಿ ಉಂಟಾಗಿದ್ದ ಭಾರೀ ಗುಂಡಿಗಳಿಂದ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ತೀವ್ರ ತೊಂದರೆ ಉಂಟಾಗುತ್ತಿತ್ತು. ಇದರಿಂದಾಗಿ ದಿನನಿತ್ಯ ಶಾಲೆಗೆ ತೆರಳುವ ವಿದ್ಯಾರ್ಥಿಗಳು ಅಪಾಯ ಎದುರಿಸುವಂತಾಗಿತ್ತು.
ಇದನ್ನೂ ಓದಿ: ರೈತರ ಮಕ್ಕಳಿಗೆ ‘ರೈತ ವಿದ್ಯಾನಿಧಿ ಸ್ಕಾಲರ್ಶಿಪ್; 2,000 ದಿಂದ 11,000ದ ವರೆಗೆ ಸಿಗಲಿದೆ ವಿದ್ಯಾರ್ಥಿವೇತನ

ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಗಮನಕ್ಕೆ ಹಲವು ಬಾರಿ ತಂದರೂ ಯಾವುದೇ ಸ್ಪಂದನೆ ದೊರೆಯದ ಹಿನ್ನೆಲೆ, ಶಾಲೆಯ ವಿದ್ಯಾರ್ಥಿಗಳೇ ಸ್ವಯಂಪ್ರೇರಿತರಾಗಿ ರಸ್ತೆಯ ಗುಂಡಿಗಳನ್ನು ಮುಚ್ಚುವ ಕಾರ್ಯಕ್ಕೆ ಮುಂದಾದರು. ತಮ್ಮದೇ ಖರ್ಚಿನಲ್ಲಿ ಕಾಂಕ್ರೀಟ್ ಹಾಗೂ ಅಗತ್ಯ ಸಾಮಗ್ರಿಗಳನ್ನು ತರಿಸಿ, ರಸ್ತೆ ಗುಂಡಿಗಳಿಗೆ ಕಾಂಕ್ರೀಟ್ ಹಾಕಿ ಸಂಚಾರಕ್ಕೆ ಅನುಕೂಲವಾಗುವಂತೆ ಮಾಡಿದರು.

ವಿದ್ಯಾರ್ಥಿಗಳ ಈ ಸಮಾಜಮುಖಿ ಕಾರ್ಯಕ್ಕೆ ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದ್ದು, “ಇದು ಕೇವಲ ರಸ್ತೆ ದುರಸ್ತಿ ಅಲ್ಲ, ಆಡಳಿತ ವ್ಯವಸ್ಥೆಗೆ ಕೊಟ್ಟ ಸಂದೇಶ” ಎಂದು ಹೇಳಿದ್ದಾರೆ. ಆದರೆ ವಿದ್ಯಾರ್ಥಿಗಳೇ ರಸ್ತೆ ದುರಸ್ತಿ ಮಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿರುವುದು ಸ್ಥಳೀಯ ಆಡಳಿತದ ನಿರ್ಲಕ್ಷ್ಯವನ್ನೇ ತೋರಿಸುತ್ತದೆ ಎಂಬ ಆರೋಪವೂ ಕೇಳಿಬಂದಿದೆ.
ಇದನ್ನೂ ಓದಿ: ಆಧಾರ್ ಸೇವಾ ಕೇಂದ್ರದಲ್ಲಿ ಜಾಬ್, ಅರ್ಜಿ ಆಹ್ವಾನ
ಸಂಬಂಧಪಟ್ಟ ಇಲಾಖೆ ಕೂಡಲೇ ರಸ್ತೆ ಸಂಪೂರ್ಣ ದುರಸ್ತಿಗೆ ಕ್ರಮ ಕೈಗೊಳ್ಳಬೇಕು ಹಾಗೂ ವಿದ್ಯಾರ್ಥಿಗಳ ಈ ಕಾರ್ಯಕ್ಕೆ ಸೂಕ್ತ ಗೌರವ ನೀಡಬೇಕು ಎಂಬ ಒತ್ತಾಯ ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗಿದೆ.













