
ಶೃಂಗೇರಿ: (ನ್ಯೂಸ್ ಮಲ್ನಾಡ್ ವರದಿ) ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಸ್ಪರ್ಧೆಯಲ್ಲಿ ಶೃಂಗೇರಿಯ ಜ್ಞಾನಭಾರತಿ ವಿದ್ಯಾಕೇಂದ್ರದ ವಿದ್ಯಾರ್ಥಿಗಳು ಅದ್ಭುತ ಪ್ರದರ್ಶನ ನೀಡಿದ್ದಾರೆ.
ಇದನ್ನೂ ಓದಿ: ಏರ್‌ಟೆಲ್, ಜಿಯೋ ರೀಚಾರ್ಜ್ ಯೋಜನೆ ಬೆಲೆ ಹೆಚ್ಚಳ?; ಜನಪ್ರಿಯ ಯೋಜನೆಗಳು ಸಹ ದುಬಾರಿ

ವಿದ್ಯಾರ್ಥಿನಿ ವೈಷ್ಣವಿ ಭರತನಾಟ್ಯ ವಿಭಾಗದಲ್ಲಿ ಪ್ರಥಮ ಸ್ಥಾನ, ವಿದ್ಯಾರ್ಥಿನಿ ಸಂಹಿತ ಜಾನಪದ ಗೀತೆಯಲ್ಲಿ ಪ್ರಥಮ ಸ್ಥಾನ, ವಿದ್ಯಾರ್ಥಿ ಅರ್ಜುನ್ ಭಟ್ ಕೊಂಕಣಿ ಭಾಷಣದಲ್ಲಿ ಪ್ರಥಮ ಸ್ಥಾನ, ವಿದ್ಯಾರ್ಥಿನಿ ತಪಸ್ಯ ಚರ್ಚಾ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ, ವಿದ್ಯಾರ್ಥಿನಿ ಐಸಿರಿ ಮತ್ತು ತಂಡ ಜಾನಪದ ನೃತ್ಯದಲ್ಲಿ ದ್ವಿತೀಯ ಸ್ಥಾನ, ವಿದ್ಯಾರ್ಥಿನಿ ಮನೋರಮ ಭಟ್ ಧಾರ್ಮಿಕ ಪಠಣದಲ್ಲಿ ದ್ವಿತೀಯ ಸ್ಥಾನ ಗಳಿಸಿದ್ದಾರೆ.

ಬಹುಮಾನ ವಿಜೇತ ವಿದ್ಯಾರ್ಥಿಗಳಿಗೆ ಶಾಲಾ ಆಡಳಿತ ಮಂಡಳಿ ಮತ್ತು ಸಮಸ್ತ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.
















