ಕಳಸ: (ನ್ಯೂಸ್ ಮಲ್ನಾಡ್ ವರದಿ) ವರದಕ್ಷಿಣೆ ಕಿರುಕುಳದ ಆರೋಪ ಎದುರಿಸುತ್ತಿದ್ದ ಕಳಸ ಪೊಲೀಸ್ ಠಾಣೆಯ ಠಾಣಾಧಿಕಾರಿಯನ್ನು ಇದೀಗ ಸಸ್ಪೆಂಡ್ ಮಾಡಲಾಗಿದೆ.
ಇದನ್ನೂ ಓದಿ: ಜೀವವಿಲ್ಲದ ದೇಹಗಳೊಂದಿಗೆ ಅಘೋರಿಗಳ ಜೀವನ…!; ಅಘೋರಿಗಳ ವಿಚಿತ್ರ ಜೀವನ ಶೈಲಿ ಕೇಳಿದ್ರೆ ಬೆಚ್ಚಿ ಬೀಳ್ತೀರಾ!

ಏನಿದು ಆರೋಪ:
ಕಳಸ ಪೊಲೀಸ್ ಠಾಣೆಯ ಠಾಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ನಿತ್ಯಾನಂದ ಗೌಡ ಮೇಲೆ ಪತ್ನಿ ಆಮಿತಾ ವರದಕ್ಷಿಣೆ ಕಿರುಕುಳ ಕುರಿತು ಕಳಸ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ಇದನ್ನೂ ಓದಿ: ರಾಜ್ಯದ BPL ಕಾರ್ಡ್ ದಾರರಿಗೆ ಮುಖ್ಯಮಂತ್ರಿಯಿಂದ ಮುಖ್ಯ ಮಾಹಿತಿ; ಮಿಸ್ ಮಾಡ್ದೆ ಈ ಸುದ್ದಿ ಓದಿ
50 ಲಕ್ಷ ವರದಕ್ಷಿಣೆಗೆ ಬೇಡಿಕೆ:
ಜ.17ರಂದು ನಿತ್ಯಾನಂದ ಗೌಡ, ಆಮಿತಾ ಅವರ ಮೇಲೆ ಹಲ್ಲೆ ನಡೆಸಿ ಕೆನ್ನೆಗೆ ಹೊಡೆದು, ಕಾಲಿನಿಂದ ಒದ್ದು ರೂಮಿನಿಂದ ಹೊರ ಹಾಕಿದ್ದು, 50 ಲಕ್ಷ ವರದಕ್ಷಿಣೆ ನೀಡಬೇಕು. ಇಲ್ಲದಿದ್ದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಅಮಿತಾ ಕಳಸ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.
ಇದನ್ನೂ ಓದಿ: ಸ್ಕೂಲ್ ಬಸ್ಗೆ ಹಳದಿ ಕಲರ್ ಯಾಕೆ ಇರುತ್ತೆ ಗೊತ್ತಾ!; ಇದರ ಹಿಂದಿದೆ ರಹಸ್ಯ ಸಂದೇಶ!
ದೂರು ನೀಡಲು ಬಂದ ಹೆಣ್ಣು ಮಕ್ಕಳ ಜೊತೆಯಲ್ಲಿ ಅಸಭ್ಯವಾಗಿ ವರ್ತಿಸುವುದಲ್ಲದೇ ಪಾಸ್ಪೋರ್ಟ್ ಮಾಡಲು ಬರುವ ಮಹಿಳೆಯರನ್ನು ಲೈಂಗಿಕ ಸಂಪರ್ಕಕ್ಕೆ ಕರೆಯುತ್ತಾನೆ ಎಂದು ಆರೋಪಿಸಲಾಗಿತ್ತು. ಅಲ್ಲದೆ ಈ ಹಿಂದೆ ಕಾಪು ಪೊಲೀಸ್ ಠಾಣೆಯಲ್ಲಿ ಮುಸ್ಲಿಂ ಮಹಿಳೆಯೊಂದಿಗೆ ಅನೈತಿಕ ಸಂಬಂಧ ಹಾಗೆಯೇ ಕೋಟ, ಬ್ರಹ್ಮಾವರ ಠಾಣೆಯಲ್ಲಿ ಮಹಿಳೆಯರಿಗೆ ನ್ಯಾಯ ಕೊಡಿಸುವುದಾಗಿ ಹೇಳಿ ದೈಹಿಕ ಸಂಪರ್ಕ ಬೆಳೆಸಿದ್ದಾರೆ ಎಂದು ಕಳಸ ಪೊಲೀಸ್ ಠಾಣೆಯಲ್ಲಿ ಪಿ.ಎಸ್.ಐ ನಿತ್ಯಾನಂದ ಗೌಡ ಸೇರಿದಂತೆ ನಾಲ್ಕು ಜನರ ವಿರುದ್ಧ ದೂರು ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಇದೀಗ ಸಸ್ಪೆಂಡ್ ಮಾಡಲಾಗಿದೆ.












