ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಕಾಫಿನಾಡಿನಲ್ಲಿ ನಿರಂತರ ಸುರಿಯುತ್ತಿರುವ ಭಾರೀ ಮಳೆಯಿಂದ ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿದ್ದು, ಪರಿಣಾಮ ಸೇತುವೆ ಮುಳುಗಿ ಜನರು ಪರದಾಡುವ ಸ್ಥಿತಿ ಮೂಡಿಗೆರೆ ತಾಲೂಕಿನ ಬೈದುವಳ್ಳಿ ಗ್ರಾಮದಲ್ಲಿ ನಿರ್ಮಾಣವಾಗಿದೆ.
ಇದನ್ನೂ ಓದಿ: ಮುದ್ರಾ ಯೋಜನೆಯಡಿ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ; ಜಸ್ಟ್ ಈ ರೀತಿ ಅರ್ಜಿ ಸಲ್ಲಿಸಿ

ಭಾರೀ ಮಳೆಯಿಂದಾಗಿ ನದಿಯಲ್ಲಿ ನೀರಿನ ಮಟ್ಟ ಏರಿಕೆಯಾಗಿ ಎರಡು ಗ್ರಾಮದ ಸಂಪರ್ಕ ಕಡಿತಗೊಂಡಿದೆ. ಇಲ್ಲಿನ ಹೇಮಾವತಿ ನದಿ ಮೈದುಂಬಿ ಹರಿಯುತ್ತಿದ್ದು ಪಕ್ಕದ ತೋಟಗಳಿಗೆ ನೀರು ನುಗ್ಗಿ ಕಾಫಿ ತೋಟ, ಅಡಿಕೆ ತೋಟ ಜಲಾವೃತಗೊಂಡಿದೆ. ಮೂಡಿಗೆರೆ ತಾಲೂಕಿನ ಹೆಸಗೋಡುವಿನಲ್ಲೂ ಕಾಫಿತೋಟಗಳಿಗೆ ನೀರು ನುಗ್ಗಿ ಜಲಾವೃತಗೊಂಡಿದೆ. ಅಲ್ಲದೆ ಮೂಡಿಗೆರೆ ತಾಲೂಕಿನ ಕೆಸವಳಲು ಕೂಡಿಗೆ ಸಂಗಮ ಕೂಡ ಭರ್ತಿಯಾಗಿದ್ದು ಜನ ಕಂಗಾಲಾಗಿದ್ದಾರೆ.
ಇದನ್ನೂ ಓದಿ: PUC ಪಾಸ್ ಆದ ವಿದ್ಯಾರ್ಥಿಗಳಿಗೆ 40,000 ಸ್ಕಾಲರ್ ಶಿಪ್; ನೇರ ನಿಮ್ಮ ಖಾತೆಗೆ ಜಮಾ!












