ನೇಣು ಬಿಗಿದುಕೊಂಡು ಉಪತಹಶೀಲ್ದಾರ್ ಆತ್ಮಹತ್ಯೆ

ಹಾಸನ: (ನ್ಯೂಸ್ ಮಲ್ನಾಡ್ ವರದಿ) ನೇಣುಬಿಗಿದುಕೊಂಡು ಉಪತಹಶೀಲ್ದಾರ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ನಗರದ ಬಿಎಂ ರಸ್ತೆಯಲ್ಲಿರುವ ಲಾಡ್ಜ್‌ನಲ್ಲಿ ನಡೆದಿದೆ.
ತಿಮ್ಮಯ್ಯ (52) ಆತ್ಮಹತ್ಯೆಗೆ ಶರಣಾದ ಉಪತಹಶೀಲ್ದಾರ್.

ಮೈಸೂರು ಜಿಲ್ಲೆ ಸಾಲಿಗ್ರಾಮದಲ್ಲಿ ಉಪತಹಶೀಲ್ದಾರ್ ಆಗಿದ್ದ ತಿಮ್ಮಯ್ಯ ಮೂರು ವರ್ಷಗಳ ಹಿಂದೆ ಹಾಸನದಲ್ಲಿ ಕರ್ತವ್ಯ ನಿರ್ವಹಿಸಿದ್ದರು. ನಿನ್ನೆ (ಮೇ 30) ಲಾಡ್ಜ್‌ನಲ್ಲಿ 4 ಪುಟದ ಡೆತ್‌ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಮೂಲತಃ ಕೊಡಗು ಜಿಲ್ಲೆಯವರಾದ ತಿಮ್ಮಯ್ಯ ಹಾಸನ ನಗರದ ಚನ್ನಪಟ್ಟಣದ ದ್ಯಾವಮ್ಮ ಬಡಾವಣೆಯಲ್ಲಿ ಕುಟುಂಬಸ್ಥರೊಂದಿಗೆ ವಾಸವಿದ್ದರು. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.