ಮಲೆನಾಡು ಹಾಗೂ ಬಯಲುಸೀಮೆ ಭಾಗಗಳಲ್ಲಿ ಅಡಿಕೆ, ಕಾಫಿ, ಕಾಳುಮೆಣಸು, ತೆಂಗು ಸೇರಿದಂತೆ ವಿವಿಧ ಬೆಳೆಗಳಿಗೆ ಕೀಟಬಾಧೆ ದೊಡ್ಡ ಸಮಸ್ಯೆಯಾಗಿ ಪರಿಣಮಿಸಿರುವ ಹಿನ್ನೆಲೆಯಲ್ಲಿ “ಬಯೋಬೀಟಲ್ ಶೀಲ್ಡ್” ಎಂಬ ಜೈವಿಕ ಉತ್ಪನ್ನವನ್ನು ಅಭಿವೃದ್ಧಿಪಡಿಸಿರುವುದಾಗಿ ಬಾಲಸುಬ್ರಹ್ಮಣ್ಯ ಎಚ್.ಎಂ. ತಿಳಿಸಿದ್ದಾರೆ.
ಅವರ ಪ್ರಕಾರ, ಈ ಉತ್ಪನ್ನವನ್ನು ವಿವಿಧ ಬೆಳೆಗಳಿಗೆ ಸಿಂಪಡಿಸಿದರೆ ಹಾನಿಕಾರಕ ಕೀಟಗಳ ನಿಯಂತ್ರಣಕ್ಕೆ ಸಹಕಾರಿಯಾಗುತ್ತದೆ. ಒಂದು ಬಾರಿ ಸಿಂಪಡಿಸಿದರೆ ಕನಿಷ್ಠ ಆರು ತಿಂಗಳಿಂದ ಒಂದು ವರ್ಷದವರೆಗೆ ಕೀಟಬಾಧೆಯಿಂದ ರಕ್ಷಣೆ ದೊರೆಯುವ ಸಾಧ್ಯತೆಯಿದೆ ಎಂದು ಅವರು ದಾವೆ ಮಾಡಿದ್ದಾರೆ.

ರೈತರ ತೋಟಗಳಲ್ಲಿ ನಡೆಸಿದ ಪ್ರಯೋಗಗಳಲ್ಲಿ ಉತ್ತಮ ಫಲಿತಾಂಶ ದೊರೆತಿದೆ ಎಂದು ಅವರು ತಿಳಿಸಿದ್ದಾರೆ. ಈ ಉತ್ಪನ್ನವು ತೋಟಗಾರಿಕಾ ಬೆಳೆಗಳಲ್ಲಿ ಕೀಟ ನಿರ್ವಹಣೆಗೆ ಹೊಸ ಪರ್ಯಾಯವಾಗಬಹುದು ಎಂಬ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದ್ದಾರೆ.












