ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ (ಕೆಪಿಸಿಸಿ) ಪ್ರಚಾರ ಸಮಿತಿಯ ಮುಖ್ಯ ಸಂಯೋಜಕರಾಗಿ ಸುಧೀರ್ ಕುಮಾರ್ ಮುರೊಳ್ಳಿ ಅವರನ್ನು ನೇಮಕ ಮಾಡಲಾಗಿದೆ.
ಇದನ್ನೂ ಓದಿ: 60% ಅಂಕ ಪಡೆದ ವಿದ್ಯಾರ್ಥಿಗಳಿಗೆ 50,000 ಸ್ಕಾಲರ್ ಶಿಪ್

ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ಮಂಗಳವಾರ (ಜುಲೈ 29ರಂದು) ಹೊರಡಿಸಿದ ಪತ್ರಿಕಾ ಪ್ರಕಟಣೆಯಲ್ಲಿ ಈ ಮಾಹಿತಿ ನೀಡಿದ್ದಾರೆ. ರಾಜ್ಯದಲ್ಲಿ ಪಕ್ಷದ ಪ್ರಚಾರ ಕಾರ್ಯಗಳಿಗೆ ಹೊಸ ಹುರುಪು ನೀಡುವ ಉದ್ದೇಶದಿಂದ ಈ ನೇಮಕಾತಿಗಳನ್ನು ಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ.
ತಮ್ಮದೇ ಆದ ವರ್ಚಸ್ಸು ಹೊಂದಿರುವ ಸುಧೀರ್ ಕುಮಾರ್ ಮುರೊಳ್ಳಿ ಅವರು ಉತ್ತಮ ಸಂಘಟನಾಕಾರರಾಗಿದ್ದು, ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸ್ನೇಹಜೀವಿಯಾಗಿ ಸಮಾಜಮುಖಿ ಹಾಗೂ ಶೃಂಗೇರಿ, ಕೊಪ್ಪ ಭಾಗದಲ್ಲಿ ಸಾಕಷ್ಟು ಹೆಸರು ಮಾಡಿದ್ದಾರೆ. ಇವರ ಕಾರ್ಯವೈಖರಿಯನ್ನು ಪರಿಗಣಿಸಿ ಮುಖ್ಯ ಸಂಯೋಜಕರನ್ನಾಗಿ ನೇಮಕ ಮಾಡಲಾಗಿದೆ.
ಇದನ್ನೂ ಓದಿ: ರಾಜ್ಯದ ರೈತರಿಗೆ ಎಚ್ಚರಿಕೆ; ಪಿಎಂ ಕಿಸಾನ್ ಹಣ 110 ಕೋಟಿ ವಂಚನೆ!












