ಕಳಸ/ಮಂಗಳೂರು: (ನ್ಯೂಸ್ ಮಲ್ನಾಡ್ ವರದಿ)ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಮಾಡಿದ್ದ ಶಂಕಿತ ಆರೋಪಿಗಳನ್ನು ಬಂಧಿಸಲಾಗಿದೆ.
ಇದನ್ನೂ ಓದಿ: ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ

8 ಶಂಕಿತ ಆರೋಪಿಗಳ ಪೈಕಿ ಇಬ್ಬರು ಹಿಂದೂ ಯುವಕರು ಎಂದು ಹೇಳಲಾಗುತ್ತಿದೆ. ವಿಡಿಯೋ ಸಾಕ್ಷ್ಯದ ಆಧಾರದ ಮೇಲೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. 8 ಆರೋಪಿಗಳ ವಿಚಾರಣೆ ತೀವ್ರಗೊಂಡಿದ್ದು, ವಶಕ್ಕೆ ಪಡೆದಿರುವ ಕೆಲ ಶಂಕಿತ ಆರೋಪಿಗಳು ದಕ್ಷಿಣ ಕನ್ನಡದಲ್ಲೇ ಅವಿತು ಕುಳಿತಿದ್ದರು ಎನ್ನಲಾಗಿದೆ.
ಇದನ್ನೂ ಓದಿ: ಮನೆಯಲ್ಲಿ ಪಾಲಿಶ್ ಅಕ್ಕಿ ಬಳಸೋ ಮುನ್ನ ಹುಷಾರ್; ಹೊರಬಿತ್ತು ಅಘಾತಕಾರಿ ಅಂಶ!
ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಯಲ್ಲಿ ಸಫ್ವಾನ್, ಕಲಂದರ್ ಶಾಫಿ, ಮುಝಮ್ಮಿಲ್, ರಿಝ್ವಾನ್ ಹಾಗೂ ಚಿಕ್ಕಮಗಳೂರಿನ ಶೃಂಗೇರಿ ಮೂಲದ ರಂಜಿತ್ ಹಾಗೂ ಕಳಸ ಮೂಲದ ನಾಗರಾಜ್ ಅನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ. ಇನ್ನು ಕಳಸದ ಇಬ್ಬರು ಶಾಮಿಯಾನ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದರು. ಕಳೆದ ಒಂದು ತಿಂಗಳ ಹಿಂದೆ ಕೆಲಸ ಬಿಟ್ಟಿದ್ದರು ಎನ್ನಲಾಗಿದೆ.












