ತರೀಕೆರೆ:( ನ್ಯೂಸ್ ಮಲ್ನಾಡ್ ವರದಿ) ಯುವಕನೊಬ್ಬ ಭದ್ರಾ ಬಲದಂಡೆ ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಶರಣಾದ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಬಾವಿಕೆರೆ ಗ್ರಾಮದಲ್ಲಿ ನಡೆದಿದೆ.
ಮೃತನನ್ನು ಆಂಧ್ರ ಪ್ರದೇಶ ಮೂಲದ ವಿನಯ್ ರೆಡ್ಡಿ (26) ಎಂದು ಗುರುತಿಸಲಾಗಿ ದ್ದು , ಆತ್ಮಹತ್ಯೆಗೆ ಕೌಟುಂಬಿಕ ಕಲಹ ಕಾರಣ ಇರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

ಭದ್ರಾ ಡ್ಯಾಂನಿಂದ ಚಿತ್ರದುರ್ಗಕ್ಕೆ ನೀರು ಸರಬರಾಜು ಮಾಡುವ ಭೋಪಾಲ್ ಮೂಲದ ಕಂಪನಿಯಲ್ಲಿ ಮೇಲ್ವಿಚಾರಕನಾಗಿ ಯುವಕ ಕೆಲಸ ಮಾಡುತ್ತಿದ್ದ.
ಇನ್ನು ಅಗ್ನಿಶಾಮಕ ಸಿಬ್ಬಂದಿ, ಮುಳುಗು ತಜ್ಞ ಮಲ್ಪೆ ಈಶ್ವರ್ ಯುವಕನ ಶವ ಪತ್ತೆ ಮಾಡಿದ್ದಾರೆ. ಲಕ್ಕವಳ್ಳಿ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.












