ಶೃಂಗೇರಿ: ಮಾರಕಾಸ್ತ್ರಗಳಿಂದ ದಾಳಿಗೆ ಯತ್ನ ಪ್ರಕರಣ: ಗ್ರಾಮ ಪಂಚಾಯಿತಿ ಸದಸ್ಯ ಶಬರೀಶ್ ಬಂಧನ

ಶೃಂಗೇರಿ: (ನ್ಯೂಸ್ ಮಲ್ನಾಡ್ ವರದಿ) ಕಳೆದ ವಾರ ಶಿಡ್ಲೆ ಸಮೀಪ ತಲ್ವಾರ್ ನಿಂದ ದಾಳಿಗೆ ಯತ್ನಿಸಿದ್ದ ಪ್ರಕರಣಕ್ಕೆ ಹಲ್ಲೆಗೆ ಕುಮ್ಮಕ್ಕು ನೀಡಿರುವ ಆರೋಪದ ಮೇರೆಗೆ ವಿದ್ಯಾರಣ್ಯಪುರ ಮಾಜಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಶಬರೀಶ್ ನನ್ನು ಬಂಧಿಸಲಾಗಿದೆ.


ಇದನ್ನೂ ಓದಿ: ಪೋಸ್ಟ್‌ ಆಫೀಸ್‌ ನಲ್ಲಿ ಭರ್ಜರಿ ಜಾಬ್‌ ಆಫರ್‌; 10th ಪಾಸ್‌ ಆದವರು ಈಗಲೇ ಅರ್ಜಿ ಸಲ್ಲಿಸಿ


ಕಳೆದ ವಾರ ಶೃಂಗೇರಿ ತಾಲೂಕಿನ ಶಿಡ್ಲೆ ಸಮೀಪ ಸುಮುಖ ಎನ್ನುವ ಯುವಕನ ಮೇಲೆ ಮನೆಯ ಎದುರು ರಾತ್ರಿ ಸಮಯದಲ್ಲಿ ತಲ್ವಾರ್ ನಿಂದ ದಾಳಿಗೆ ಯತ್ನಿಸಿದ್ದರು. ಈ ಸಂಬಂಧ ನೆಮ್ಮಾರ್ʼನ ಶಬರೀಶ್ (23) ಹಾಗೂ ಎನ್.‌ ಆರ್‌ ಪುರದ ಕಟ್ಟಿನಮನೆ ವಾಸಿ ವಿವೇಕ (24) ನನ್ನು ಕಳೆದ ನಾಲ್ಕು ದಿನಗಳ ಹಿಂದೆ ಬಂಧಿಸಲಾಗಿತ್ತು. ಆದರೆ, ಇದೀಗ ಆರೋಪಿಗಳನ್ನು ವಿಚಾರಣೆಗೆ ಒಳಪಡಿಸಿದಾಗ ಹಲವು ಅಂಶಗಳು ಹೊರಬಂದಿದ್ದು, ಹಲ್ಲೆಗೆ ಕುಮ್ಮಕ್ಕು ನೀಡಿರುವ ಆರೋಪದ ಹಿನ್ನೆಲೆ ವಿದ್ಯಾರಣ್ಯಪುರ ಮಾಜಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಶಬರೀಶ್ ನನ್ನು ಪೊಲೀಸರು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ.


ಇದನ್ನೂ ಓದಿ: ಪಿಎಂ ಕಿಸಾನ್ ಯೋಜನೆ; 19 ನೇ ಕಂತಿನ 2000 ಹಣ ಜಮಾ!


ಹಲ್ಲೆಗೊಳಗಾದ ವ್ಯಕ್ತಿ ದೂರಿನಲ್ಲಿ ಹಲ್ಲೆಯ ಹಿಂದೆ ಶಬರೀಶ್ ಇರುವ ಅನುಮಾನ ವ್ಯಕ್ತಪಡಿಸಿದ್ದರು.

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.