ಶಿವಮೊಗ್ಗ: (ನ್ಯೂಸ್ ಮಲ್ನಾಡ್ ವರದಿ) ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ನೇತಾಜಿ ವೃತ್ತದ ಬಳಿಯ ವಿಜಯನಗರದಲ್ಲಿ ನಡೆದಿದೆ. ಸೌಮ್ಯ (25) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಯುವತಿ.
ಇದನ್ನೂ ಓದಿ: ಗ್ರಾಮ ಆಡಳಿತಾಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ ರಾಜೇಂದ್ರ ಕುಮಾರ್ ಕಟಾರಿಯಾ; ಏನದು ಸೂಚನೆ…? ಇಲ್ಲಿದೆ ನೋಡಿ

ಖಾಸಗಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ಸೌಮ್ಯ ಕಳೆದ ಹಲವು ದಿನಗಳಿಂದ ಉಸಿರಾಟದ ಸಮಸ್ಯೆ ಎದುರಾಗಿದ್ದು ಇದರಿಂದ ತೀವ್ರವಾಗಿ ಆರೋಗ್ಯ ಸಮಸ್ಯೆಯನ್ನು ಎದುರಿಸಿದ್ದಳು. ಅನಾರೋಗ್ಯದಿಂದ ಬೇಸತ್ತು ಸೌಮ್ಯ ಮನೆಯಲ್ಲಿ ಯಾರೂ ಇಲ್ಲದ ವೇಳೆ ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಇದನ್ನೂ ಓದಿ: ಇ-ಖಾತೆ ಇಲ್ಲದ ಆಸ್ತಿ ಮಾಲೀಕರಿಗೆ ಖಾತೆ ಪಡೆಯಲು ಮತ್ತೊಮ್ಮೆ ಅವಕಾಶ!; ಇಲ್ಲಿದೆ ನೋಡಿ ಡಿಟೈಲ್ಸ್
ಘಟನೆ ಕುರಿತು ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ರಾಜ್ಯದ ರೈತರಿಗೆ ಇಂಧನ ಸಚಿವರಿಂದ ಮುಖ್ಯ ಮಾಹಿತಿ; ಅಕ್ರಮ ಪಂಪ್ ಸೆಟ್ ಕುರಿತು ಮಹತ್ವದ ಘೋಷಣೆ!












