ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ನೇಣು ಬಿಗಿದುಕೊಂಡು ಸರ್ವೇ ಅಧಿಕಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಪಟ್ಟಣದಲ್ಲಿ ನಡೆದಿದೆ. ಶಿವಕುಮಾರ್ (45) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಸರ್ವೇ ಅಧಿಕಾರಿ.
ಇದನ್ನೂ ಓದಿ: ಹೊಸ ರೇಷನ್ ಕಾರ್ಡ್ʼಗೆ ಅರ್ಜಿ ಸಲ್ಲಿಕೆ ಆರಂಭ!; ಈ ದಾಖಲೆ ಕಡ್ಡಾಯ

ತುಮಕೂರು ಜಿಲ್ಲೆಯ ಗುಬ್ಬಿ ಮೂಲದವರಾದ ಶಿವಕುಮಾರ್ ಮೂಡಿಗೆರೆ ಸರ್ವೆ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಅಲ್ಲದೆ ಚಿಕ್ಕಮಗಳೂರು ನೌಕರರ ಸಂಘದ ನಿರ್ದೇಶಕರಾಗಿದ್ದರು. ಕಳೆದ ಹತ್ತು ವರ್ಷಗಳಿಂದ ಬಳಸುತ್ತಿದ್ದ ಸಿಮ್ ಅನ್ನು ನಿನ್ನೆಯಷ್ಟೇ ಚೇಂಜ್ ಮಾಡಿದ್ದರು. ಹೀಗಾಗಿ ಸರ್ವೇ ಅಧಿಕಾರಿ ಶಿವಕುಮಾರ್ ಆತ್ಮಹತ್ಯೆ ಅನುಮಾನಕ್ಕೆ ಕಾರಣವಾಗಿದೆ.
ಇದನ್ನೂ ಓದಿ: ಪೋಸ್ಟ್ ಆಫೀಸ್ ನಲ್ಲಿ ಜಾಬ್ ಆಫರ್; 10th ವಿದ್ಯಾರ್ಹತೆ, ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿದೆ
ಮೂಡಿಗೆರೆ ಪಟ್ಟಣದ KSRTC ಬಸ್ ನಿಲ್ದಾಣದ ಬಳಿ ಇರುವ ಬಾಡಿಗೆ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ಮನೆ ಬಳಿ ಯಾರನ್ನೂ ಬಿಡದೆ ಪೊಲೀಸರು ಬ್ಯಾರಿಕೇಡ್ ಹಾಕಿದ್ದಾರೆ. ಮೂಡಿಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. (ವರದಿ- ತನು ಕೊಟ್ಟಿಗೆಹಾರ)
ಇದನ್ನೂ ಓದಿ: ಈ ದಿನ ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹೀಗೆ ಚೆಕ್ ಮಾಡಿ…












