ಎನ್. ಆರ್. ಪುರ: (ನ್ಯೂಸ್ ಮಲ್ನಾಡ್ ವರದಿ) ಶೃಂಗೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಟಿ.ಡಿ. ರಾಜೇಗೌಡರ ಹುಟ್ಟುಹಬ್ಬದ ಪ್ರಯುಕ್ತ ಬಾಳೆಹೊನ್ನೂರು ಬ್ಲಾಕ್ ಯುವ ಕಾಂಗ್ರೆಸ್ ವತಿಯಿಂದ ನರಸಿಂಹರಾಜಪುರದ ಕಾಂಗ್ರೆಸ್ ಕಚೇರಿಯಲ್ಲಿ ನಾಳೆ (ಬೆಳಗ್ಗೆ 10 ಗಂಟೆಗೆ) ರಕ್ತದಾನ ಶಿಬಿರವನ್ನು ಆಯೋಜಿಸಲಾಗಿದೆ.
ಈ ಕುರಿತು ಮಾಹಿತಿ ನೀಡಿದ ಬಾಳೆಹೊನ್ನೂರು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ರತನ್ ಗೌಡ ಅರಗಿ, ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಶಾಸಕ ಟಿ.ಡಿ. ರಾಜೇಗೌಡರ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ರಕ್ತದಾನ ಮಾಡುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಬಾಳೆಹೊನ್ನೂರು ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಗೇರ್ಬೈಲ್ ನಟರಾಜ್, ಚಿಕ್ಕಮಗಳೂರು ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಶ್ರೀಜಿತ್ ಗೌಡ ದಂಡಿನಮಕ್ಕಿ, ನರಸಿಂಹರಾಜಪುರ ಪಟ್ಟಣ ಯುವ ಕಾಂಗ್ರೆಸ್ ಅಧ್ಯಕ್ಷ ವಿಜಯ್ ಸೇರಿದಂತೆ ಕಾಂಗ್ರೆಸ್ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.
ರಕ್ತದಾನ ಶಿಬಿರದಲ್ಲಿ ಸಾರ್ವಜನಿಕರು ಸ್ವಯಂಪ್ರೇರಿತವಾಗಿ ಭಾಗವಹಿಸಿ ಮಾನವೀಯ ಸೇವೆಗೆ ಕೈಜೋಡಿಸುವಂತೆ ಸಂಘಟಕರು ಕೋರಿದ್ದಾರೆ. (ವರದಿ- ಶಶಿ ಬೆತ್ತದಕೊಳಲು)












