ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮದ (KREDL) ಅಧ್ಯಕ್ಷರಾಗಿ ಶಾಸಕ ಟಿ.ಡಿ. ರಾಜೇಗೌಡ ಅವರನ್ನು ಮುಂದುವರಿಸುವಂತೆ ರಾಜ್ಯ ಸರ್ಕಾರ ಬುಧವಾರ ಆದೇಶ ಹೊರಡಿಸಿದೆ.
ಇದನ್ನೂ ಓದಿ: ರೈತರಿಗೆ ಸಿಹಿ ಸುದ್ದಿ ಕೊಟ್ಟ ರಾಜ್ಯ ಸರ್ಕಾರ; ಬೆಂಬಲ ಬೆಲೆ ಯೋಜನೆಯಡಿಯಲ್ಲಿ ವಿವಿಧ ಬೆಳೆಗಳ ಖರೀದಿ ಅವಧಿ ವಿಸ್ತರಣೆ

ಟಿ.ಡಿ. ರಾಜೇಗೌಡ ಅವರನ್ನು 2024ರ ಜನವರಿ 26ರಿಂದ ಎರಡುವರೆ ವರ್ಷಗಳ ಅವಧಿಗೆ ನಿಗಮದ ಅಧ್ಯಕ್ಷರಾಗಿ ನೇಮಿಸಲಾಗಿತ್ತು. ಅವರ ಅವಧಿ 2026ರ ಜನವರಿ 26ರಂದು ಪೂರ್ಣಗೊಂಡಿತ್ತು. ಇದೀಗ 2026ರ ಜನವರಿ 28ರಂದು ಸರ್ಕಾರ ಹೊಸ ಆದೇಶ ಹೊರಡಿಸಿ, ನಿಗಮ ಮಂಡಳಿ ಅಧ್ಯಕ್ಷರಿಗೆ ಸಚಿವ ಸಂಪುಟ ದರ್ಜೆಯ ಸ್ಥಾನಮಾನ ನೀಡುತ್ತಾ, ಮುಂದಿನ ಆದೇಶದವರೆಗೆ ಅವರು ಅಧ್ಯಕ್ಷರಾಗಿ ಮುಂದುವರಿಯಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.















