
ಶೃಂಗೇರಿ: (ನ್ಯೂಸ್ ಮಲ್ನಾಡ್ ವರದಿ) ಅರಣ್ಯ ಇಲಾಖೆಯ ಆನೆ ಕಾರ್ಯಪಡೆಯ ಕಾರ್ಯಾಚರಣೆಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮದ (KREDL) ಸಿಎಸ್ಆರ್ ನಿಧಿಯಿಂದ ಎರಡು ಜೀಪ್ಗಳನ್ನು ಶಾಸಕ ಟಿ.ಡಿ. ರಾಜೇಗೌಡ ಅವರು ಹಸ್ತಾಂತರಿಸಿದರು.


ಕೆಆರ್ಇಡಿಎಲ್ ಅಧ್ಯಕ್ಷರೂ ಆಗಿರುವ ಶೃಂಗೇರಿ ಕ್ಷೇತ್ರದ ಶಾಸಕ ಟಿ.ಡಿ. ರಾಜೇಗೌಡ ಅವರು ಎರಡು ಜೀಪ್ಗಳನ್ನು ಅರಣ್ಯ ಇಲಾಖೆಯ ಡಿಎಫ್ಒ ಶಿವಶಂಕರ್ ಅವರಿಗೆ ಹಸ್ತಾಂತರಿಸಿದರು.
ಅರಣ್ಯ ಪ್ರದೇಶಗಳಲ್ಲಿ ಆನೆಗಳ ಚಲನವಲನಗಳ ಮೇಲೆ ನಿಗಾ ಇರಿಸುವುದು, ಆನೆಗಳ ಹಾವಳಿ ನಿಯಂತ್ರಣ ಹಾಗೂ ತುರ್ತು ಕಾರ್ಯಾಚರಣೆಗಳನ್ನು ಕೈಗೊಳ್ಳಲು ಈ ವಾಹನಗಳು ಅನುಕೂಲವಾಗಲಿವೆ. ಆನೆ-ಮಾನವ ಸಂಘರ್ಷ ತಡೆಗಟ್ಟುವ ನಿಟ್ಟಿನಲ್ಲಿ ಅರಣ್ಯ ಇಲಾಖೆಯ ಕಾರ್ಯಪಡೆಗೆ ಈ ವಾಹನಗಳು ನೆರವಾಗಲಿವೆ.














