ಕೊಟ್ಟಿಗೆಹಾರ: (ನ್ಯೂಸ್ ಮಲ್ನಾಡ್ ವರದಿ) ಬಣಕಲ್ ಪೊಲೀಸ್ ಠಾಣೆಯಲ್ಲಿ ಸಹಾಯಕ ಸಬ್ ಇನ್ ಸ್ಪೆಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಟಿ. ಕೆ ಶಶಿ ಅವರನ್ನು ಸಬ್ ಇನ್ ಸ್ಪೆಕ್ಟರ್ ಆಗಿ ಚಿಕ್ಕಮಗಳೂರು ಪೊಲೀಸ್ ವರಿಷ್ಠಾಧಿಕಾರಿ ವಿಕ್ರಂ ಅಮಟೆ ಅವರು ಭಡ್ತಿಯ ಗರಿ ನೀಡುವ ಮೂಲಕ ಅಭಿನಂದಿಸಿದರು.
ಇದನ್ನೂ ಓದಿ: ರೇಷನ್ ಕಾರ್ಡ್ ಇದ್ದವರಿಗೆ ಗುಡ್ ನ್ಯೂಸ್; ಮನೆ ದುರಸ್ತಿಗೆ ಸಿಗಲಿದೆ ಸಹಾಯಧನ; ಈಗಲೇ ಅರ್ಜಿ ಸಲ್ಲಿಸಿ

ಆಲ್ದೂರು, ಹರಿಹರಪುರ, ಕುದುರೆಮುಖ, ಬಣಕಲ್ ಪೊಲೀಸ್ ಠಾಣೆಗಳಲ್ಲಿ ಪೊಲೀಸ್ ಕಾನ್ ಸ್ಟೇಬಲ್ ಆಗಿ ತದ ನಂತರ ಹೆಡ್ ಕಾನ್ ಸ್ಟೆಬಲ್ ಆಗಿ ಸೇವೆ ಸಲ್ಲಿಸಿದ್ದಾರೆ. ಬಳಿಕ ಎ.ಎಸ್.ಐ ಆಗಿ ಭಡ್ತಿ ಪಡೆದು ಬಣಕಲ್ ನಲ್ಲಿ ಪ್ರಾಮಾಣಿಕ ಸೇವೆ ನೀಡುತ್ತಾ ಬಂದಿದ್ದರು.29 ವರ್ಷಗಳ ಸೇವೆಯ ನಂತರ ಪೊಲೀಸ್ ಇಲಾಖೆಯ ಆದೇಶದ ಮೇರೆಗೆ ಬಾಳೂರು ಠಾಣೆಗೆ ತನಿಖೆ ವಿಭಾಗದ ಸಬ್ ಇನ್ ಸ್ಪೆಕ್ಟರ್ ಆಗಿ ಟಿ. ಕೆ ಶಶಿ ನೇಮಕಗೊಂಡಿದ್ದಾರೆ. (ವರದಿ- ತನು ಕೊಟ್ಟಿಗೆಹಾರ)
ಇದನ್ನೂ ಓದಿ: SSLC, PUC ಯಲ್ಲಿ ಫೇಲ್ ಆದ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆಯಿಂದ ಗುಡ್ ನ್ಯೂಸ್; ಏನದು? ಮಿಸ್ ಮಾಡ್ದೆ ಈ ಸುದ್ದಿ ಓದಿ












