ಶೃಂಗೇರಿ/ಮೈಸೂರು: (ನ್ಯೂಸ್ ಮಲ್ನಾಡ್ ವರದಿ) ಮೈಸೂರು ದಸರಾ ಕ್ರೀಡಾಕೂಟದ ಟೇಕ್ವಾಂಡೋ ಸ್ಪರ್ಧೆಯಲ್ಲಿ ಚರಣ್ ವಿ ಚಿನ್ನದ ಪದಕ ಹಾಗೂ ವಿವೇಕ್ ಕಂಚಿನ ಪದಕವನ್ನು ಪಡೆದಿದ್ದಾರೆ.
ಇದನ್ನೂ ಓದಿ: 4-6ನೇ ತರಗತಿ ವಿದ್ಯಾರ್ಥಿಗಳ ಗಮನಕ್ಕೆ; ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ, ಏನದು?

ಮೈಸೂರಿನಲ್ಲಿ ನಡೆದ ರಾಜ್ಯಮಟ್ಟದ ಮೈಸೂರು ದಸರಾ ಕ್ರೀಡಾಕೂಟ ಟೇಕ್ವಾಂಡೋ ಸ್ಪರ್ಧೆಯಲ್ಲಿ 82 ಕೆಜಿಯ ದೇಹ ತೂಕ ವಿಭಾಗದಲ್ಲಿ ಚರಣ್ ವಿ ಪ್ರಥಮ ಸ್ಥಾನ ಪಡೆದು ಚಿನ್ನದ ಪದಕ ಹಾಗೂ 76 ಕೆಜಿ ದೇಹ ತೂಕದ ವಿಭಾಗದಲ್ಲಿ ವಿವೇಕ್ ಮೂರನೇ ಸ್ಥಾನ ಪಡೆದು ಕಂಚಿನ ಪದಕ ಪಡೆದಿದ್ದಾರೆ.
ಇವರಿಗೆ ಶೃಂಗೇರಿ ಟೇಕ್ವಾಂಡೋ ಅಕಾಡೆಮಿ ಸಂಸ್ಥೆಯ ಪರವಾಗಿ ಅಭಿನಂದನೆ ಸಲ್ಲಿಸಿದ್ದಾರೆ.
ಇದನ್ನೂ ಓದಿ: ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಭರ್ಜರಿ ಗುಡ್ ನ್ಯೂಸ್ ಮಿಸ್ ಮಾಡ್ದೆ ಈ ಸುದ್ದಿ ಓದಿ












