ಶೃಂಗೇರಿ: (ನ್ಯೂಸ್ ಮಲ್ನಾಡ್ ವರದಿ) ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಸಂಜೀವಿನಿ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆ, ಜಿಲ್ಲಾ ಪಂಚಾಯಿತಿ ಚಿಕ್ಕಮಗಳೂರು, ತಾಲೂಕು ಪಂಚಾಯಿತಿ ಮಟ್ಟದ ಒಕ್ಕೂಟದ ಮಾಸಿಕ ಸಂತೆಯನ್ನು ನಿನ್ನೆ (03.02.2025) ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ವೈಕುಂಠಪುರ ಕೂತಗೋಡು ಇಲ್ಲಿ ಆಯೋಜಿಸಿದ್ದು, ಈ ಕಾರ್ಯಕ್ರಮವನ್ನು ಕೂತಗೋಡು ಸಂಜೀವಿನಿ ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟದ ಅಧ್ಯಕ್ಷರಾದ ಹೇಮಾವತಿ ಅವರು ಉದ್ಘಾಟಿಸಿದರು.
ಇದನ್ನೂ ಓದಿ: ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್; 10th ಪಾಸ್ ಆದವರು ಈಗಲೇ ಅರ್ಜಿ ಸಲ್ಲಿಸಿ

ಸಂಜೀವಿನಿ ವತಿಯಿಂದ ಸ್ವ-ಸಹಾಯ ಗುಂಪಿನ ಮಹಿಳೆಯರು ತಯಾರಿಸುವ ವಿವಿಧ ಬಗೆಯ ಹುಳಿ, ಹಪ್ಪಳ, ಸಾಂಬರ್ ಪದಾರ್ಥಗಳು, ಉಪ್ಪಿನಕಾಯಿ, ಚಿಪ್ಸ್, ಸಿಹಿ ತಿನಿಸುಗಳು, ದಿನ ಬಳಕೆಯ ವಸ್ತುಗಳು, ಗೃಹ ಅಲಂಕಾರಿಕ ವಸ್ತುಗಳು, ಸ್ವಚ್ಚತೆಗೆ ಪೂರಕ ವಸ್ತುಗಳು, ತರಕಾರಿಗಳು, ಹಣ್ಣುಗಳು ಪ್ರದರ್ಶನಗೊಂಡವು.

ಇದನ್ನೂ ಓದಿ: ಪಿಎಂ ಕಿಸಾನ್ ಯೋಜನೆ; 19 ನೇ ಕಂತಿನ 2000 ಹಣ ಜಮಾ!
ಇನ್ನು ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕಾರ್ಯ ನಿರ್ವಾಹಕ ಅಧಿಕಾರಿಗಳಾದ ಸುದೀಪ್ ಹೆಚ್, ಜಿ.ಪಿ.ಎಲ್.ಎಫ್ ಪದಾಧಿಕಾರಿಗಳು, ತಾಲೂಕು ಅಭಿಯಾನ ನಿರ್ವಹಣಾ ಘಟಕದ ಸಿಬ್ಬಂದಿಗಳು, ಜಿ.ಪಿ.ಎಲ್.ಎಫ್ ಸಿಬ್ಬಂದಿಗಳಯ, ಸ್ವ-ಸಹಾಯ ಸಂಘದ ಸದಸ್ಯರು, ಸಾರ್ವಜನಿಕರು ಇದ್ದರು.
ಇದನ್ನೂ ಓದಿ: ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರದಿಂದ ಖಡಕ್ ಸೂಚನೆ; ಏನದು ಸೂಚನೆ?













