
ತರೀಕೆರೆ: (ನ್ಯೂಸ್ ಮಲ್ನಾಡ್ ವರದಿ) ನಿವೃತ್ತಿ ನಂತರದ ಜಿ.ಪಿ.ಎಫ್ ಮತ್ತು ಜಿ.ಐ.ಎಸ್ ಮೆಚ್ಯೂರಿಟಿ ಹಣದ ಬಿಲ್ಲುಗಳನ್ನು ಮಾಡಿಕೊಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಕ್ಷೇತ್ರ ಶಿಕ್ಷಣಾಧಿಕಾರಿ ಕಛೇರಿಯ ಗುಮಾಸ್ತ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರುತಾಲೂಕಿನಲ್ಲಿ ನಡೆದಿದೆ. ಬೀರೂರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಗುಮಾಸ್ತ ಚಂದ್ರಶೇಖರ್ ಲೋಕಾಯುಕ್ತ ಬಲೆಗೆ ಬಿದ್ದ ವ್ಯಕ್ತಿ.
ಇದನ್ನೂ ಓದಿ; RBI ನಿಂದ ಉದ್ಯೋಗಾವಕಾಶ; ವಿವಿಧ ಪ್ರದೇಶಗಳಲ್ಲಿ ಮೆಡಿಕಲ್ ಕನ್ಸಲ್ ಟಂಟ್‌ಗಳ ನೇಮಕ

ವಯೋ ನಿವೃತ್ತಿಯ ನಂತರ ಪಡೆಯುವ ಜಿ.ಪಿ.ಎಫ್ ಮತ್ತು ಜಿ.ಐ.ಎಸ್ ಗಳ ಮೆಚ್ಯೂರಿಟಿ ಬಿಲ್ಲು ಮಾಡಿಕೊಡಲು 40,000/- ರೂ ಲಂಚದ ಹಣಕ್ಕೆ ಬೇಡಿಕೆ ಇಟ್ಟಿದ್ದು, ಗುಮಾಸ್ತ ಚಂದ್ರಶೇಖರ್ ಜೊತೆ ಮಾತನಾಡಿದ ಸಂಭಾಷಣೆಯನ್ನು ಆಡಿಯೋ ಮಾಡಿಕೊಂಡು ಲೋಕಾಯುಕ್ತಕ್ಕೆ ದೂರು ನೀಡಿದ ಹಿನ್ನೆಲೆಯಲ್ಲಿ, ಲೋಕಾಯುಕ್ತ ಅಧಿಕಾರಿ ಅನಿಲ್ ರಾತೋಡ್ ನೇತೃತ್ವದಲ್ಲಿ ದಾಳಿ ನಡೆಸಿ ಬೀರೂರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಗುಮಾಸ್ತ ಚಂದ್ರಶೇಖರ್ ಅನ್ನು ಬಂಧಿಸಲಾಗಿದೆ.

ಇದನ್ನೂ ಓದಿ; ರಾಜ್ಯದ ರೈತರಿಗೆ ಗುಡ್ ನ್ಯೂಸ್; ರೈತರ ಖಾತೆಗೆ ಬರ ಪರಿಹಾರದ ಹಣ ಬಿಡುಗಡೆ; ನಿಮ್ಮ ಖಾತಗೆ ಬಂದಿದ್ಯಾ ಹಣ
ಜಯಪುರ: ಚಾಲಕನ ನಿಯಂತ್ರಣ ತಪ್ಪಿ ಅಯ್ಯಪ್ಪ ಮಾಲಾಧಾರಿಗಳ ಬಸ್ ಪಲ್ಟಿ
ಜಯಪುರ: (ನ್ಯೂಸ್ ಮಲ್ನಾಡ್ ವರದಿ) ಚಾಲಕನ ನಿಯಂತ್ರಣ ತಪ್ಪಿ ಅಯ್ಯಪ್ಪ ಮಾಲಾಧಾರಿಗಳ ಬಸ್ ಪಲ್ಟಿಯಾಗಿರುವ ಘಟನೆ ಭಾನುವಾರ (ನಿನ್ನೆ) ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಗುಡ್ಡೆತೋಟದ ಬಳಿ ನಡೆದಿದೆ.
ಶೃಂಗೇರಿಯಿಂದ ಹೊರನಾಡಿಗೆ ತೆರಳುತ್ತಿದ್ದ ಅಯ್ಯಪ್ಪ ಮಾಲಾಧಾರಿಗಳ ಬಸ್ ಗುಡ್ಡೇತೋಟದ ಬಳಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಪರಿಣಾಮ 15 ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲ್ಲೂಕಿನ ರಂಗಸಮುದ್ರ ಗ್ರಾಮದ 34 ಅಯ್ಯಪ್ಪ ಮಾಲಾಧಾರಿಗಳು ಶೃಂಗೇರಿಯಿಂದ ಹೊರನಾಡಿಗೆ ತೆರಳುತ್ತಿದ್ದ ವೇಳೆ ಘಟನೆ ನಡೆದಿದ್ದು, ಗಾಯಾಳುಗಳನ್ನು ಜಯಪುರ, ಶೃಂಗೇರಿ ಆಸ್ಪತ್ರೆಗೆ ದಾಖಲಿಸಲಾಗಿದೆ.













