ಕೊಪ್ಪ: (ನ್ಯೂಸ್ ಮಲ್ನಾಡ್ ವರದಿ) ಪ್ರೀತಿ ನಿರಾಕರಿಸಿದ ಶಿಕ್ಷಕಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ಜಯಪುರ ಪೊಲೀಸರು ಬಂಧಿಸಿದ್ದಾರೆ. ಚಂದುವಳ್ಳಿ ಗ್ರಾಮದ ಭುವಿತ್ ಬಂಧಿತ ಆರೋಪಿ.
ಇದನ್ನೂ ಓದಿ: ಬಸ್ ಗಳ ಸುರಕ್ಷತೆಗೆ ಮಹತ್ವದ ಕ್ರಮ; ಈ ನಿಯಮಗಳ ಪಾಲನೆ ಕಡ್ಡಾಯ!

ಬಸರಿಕಟ್ಟೆಯ ಯುವತಿ ಅತಿಥಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದು, ಮಂಗಳವಾರ ಶಾಲೆ ಮುಗಿಸಿ ಬಸರಿಕಟ್ಟೆ ಚರ್ಚ್ ಹಿಂಭಾಗದ ಕಾಲು ದಾರಿಯಲ್ಲಿ ಮನೆಗೆ ತೆರಳುತ್ತಿದ್ದಾಗ ಆರೋಪಿ ಭುವಿತ್ ರಾಡ್ನಿಂದ ಶಿಕ್ಷಕಿಯ ತಲೆಗೆ ಹಲ್ಲೆ ನಡೆಸಿ, ಪಕ್ಕದ ತೋಟಕ್ಕೆ ಎಳೆದೊಯ್ದು ಅಡಕೆ ಮರಕ್ಕೆ ಕಟ್ಟಿಹಾಕಿದ್ದ. ಶಿಕ್ಷಕಿ ಚೀರಾಡುತ್ತಿದ್ದುದನ್ನು ಕೇಳಿಸಿಕೊಂಡ ಸ್ಥಳೀಯರು ಸ್ಥಳಕ್ಕೆ ಹೋದಾಗ ಆರೋಪಿ ಪರಾರಿಯಾಗಿದ್ದ. ತೀವ್ರ ಅಸ್ವಸ್ಥಳಾಗಿದ್ದ ಶಿಕ್ಷಕಿಯನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇದನ್ನೂ ಓದಿ: ರಾಜ್ಯದ ಪೊಲೀಸ್ ಸಿಬ್ಬಂದಿಗಳ ಸ್ಲೋಚ್ ಕ್ಯಾಪ್ ಗೆ ಗುಡ್ ಬೈ; ಪೊಲೀಸ್ ಪೇದೆಗಳಿಗೆ ಹೊಸ ಟೋಪಿ
ಶಿಕ್ಷಕಿ ಮೇಲೆ ಮಾರಣಾಂತಿಕ ಹಲ್ಲೆ ಹಿನ್ನೆಲೆ ಆರೋಪಿಯನ್ನು ಬಂಧಿಸಿ ಕಠಿಣ ಕ್ರಮಕ್ಕೆ ಆಗ್ರಹಿಸಿ ಸ್ಥಳೀಯರು ಜಯಪುರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಬಾಳೆಹೊನ್ನೂರು ಪಿಎಸ್ಐ ರವೀಶ್ ಹಾಗೂ ಹರಿಹರಪುರ ಪಿಎಸ್ಐ ನೇತೃತತ್ವದ ತಂಡ ಬುಧವಾರ ಮುಂಜಾನೆ ಆರೋಪಿಯನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಇದನ್ನೂ ಓದಿ: ಮುಂದಿನ ತಿಂಗಳಿನಿಂದ ಇಂದಿರಾ ಆಹಾರ ಕಿಟ್ ವಿತರಣೆ












