ರಿಪ್ಪನ್ ಪೇಟೆ: (ನ್ಯೂಸ್ ಮಲ್ನಾಡ್ ವರದಿ) ವಿದ್ಯಾರ್ಥಿಗಳನ್ನು ಶತಾಯಗತಾಯ ಕಲಿಕೆಯತ್ತ ಆಸಕ್ತಿ ತಾಳುವಂತೆ ಮಾಡುವ ಉದ್ದೇಶದಿಂದ ತಪ್ಪು ಉತ್ತರ ನೀಡಿದ ಶಿಷ್ಯರಿಂದಲೇ ಛಡಿಯಿಂದ ಏಟು ತಿನ್ನುವ ಶಿಕ್ಷಕರೊಬ್ಬರು ತಮ್ಮ ವಿಭಿನ್ನ ಮಾರ್ಗದಿಂದ ಯಶಸ್ಸನ್ನೂ ಕಂಡಿದ್ದಾರೆ.

ಇದನ್ನೂ ಓದಿ; ಕೇಂದ್ರದ ಬಂಪರ್ ಯೋಜನೆ;ಮಹಿಳೆಯರಿಗೆ ಸಿಗಲಿದೆ ಪ್ರತಿ ತಿಂಗಳು 1000 ರೂಪಾಯಿ

ಹೊಸನಗರ ತಾಲೂಕಿನ ಅಮೃತ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಾಲಂದೂರು ಗ್ರಾಮದಲ್ಲಿರುವ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಎಚ್.ಎಸ್. ಗೋಪಾಲ್ ಈ ವಿಭಿನ್ನ ಮಾರ್ಗದಿಂದ ಯಶಸ್ಸನ್ನೂ ಕಂಡಿದ್ದಾರೆ.
ಇದನ್ನೂ ಓದಿ; ಕ್ಯೂನಲ್ಲಿ ನಿಲ್ಲಬೇಕಿಲ್ಲ, ಎಲ್ಲಿಯೂ ಅಲೆಯಬೇಕಾಗಿಲ್ಲ; ಆನ್ ಲೈನ್ ನಲ್ಲೇ ಲಭ್ಯವಿದೆ ಪಡಿತರ ಚೀಟಿ ಡಿಟೈಲ್ಸ್
ಪ್ರತಿಫಲ ಸಿಗಬೇಕಾದರೆ ಹೊಸ ಪ್ರಯೋಗಗಳಿಗೆ ಅಣಿಯಾಗಲೇಬೇಕು. ಆ ನಿಟ್ಟಿನಲ್ಲಿ ನಾನು ತಪ್ಪು ಉತ್ತರ ನೀಡಿದ ವಿದ್ಯಾರ್ಥಿಯಿಂದಲೇ ಪೆಟ್ಟು ತಿನ್ನುವ ಪರಿಪಾಠ ಬೆಳೆಸಿಕೊಂಡೆ. ಶಿಕ್ಷಕರನ್ನು ದಂಡಿಸುವುದು ಹೇಗೆ ಎಂಬ ಅಳುಕಿನಿಂದಲಾದರೂ ಅವರು ಕಲಿಕೆಯಲ್ಲಿ ಹೆಚ್ಚು ಆಸಕ್ತಿ ತೋರಿ, ಕ್ರಿಯಾಶೀಲರಾಗಲಿ ಎಂಬ ಭಾವನೆ ನನ್ನದು. ಈ ಪ್ರಯೋಗ ಯಶಸ್ವಿಯಾಗಿದೆ ಎಂದು ಶಿಕ್ಷಕ ಎಚ್.ಎಸ್. ಗೋಪಾಲ್ ತಿಳಿಸಿದರು.
ಇದನ್ನೂ ಓದಿ; ಈ ಗ್ರಾಮ ಪಂಚಾಯತಿಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ; ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್
ಶಿಕ್ಷಕರಿಗೇ ಹೊಡೆಯಬೇಕಲ್ಲ ಎಂಬ ಕಾರಣದಿಂದ ವಿದ್ಯಾರ್ಥಿಗಳು ಕಲಿಕೆಯಲ್ಲಿ ಆಸಕ್ತಿ ತಾಳುತ್ತಿದ್ದಾರೆ. ಈ ಮಾದರಿ ಯಶಸ್ವಿಯಾಗಿದೆ ಎಂದು ಈಗ ಕಲಿಯುತ್ತಿರುವ ವಿದ್ಯಾರ್ಥಿಗಳ ಪಾಲಕರು ಮತ್ತು ಈ ಹಿಂದೆ ಇಲ್ಲಿ ಕಲಿತು ಹೋಗಿರುವ ಹಳೆ ವಿದ್ಯಾರ್ಥಿಗಳು ಹೇಳುತ್ತಾರೆ.
ಇದನ್ನೂ ಓದಿ; ಈ ಯೋಜನೆಯಲ್ಲಿ ಸಿಗುತ್ತೆ 3,000 ರೂ!; ಮಹಿಳೆ ಮತ್ತು ಪುರುಷರಿಗೂ ಸಿಗುತ್ತೆ ಬೆನಿಫಿಟ್
ಶಿಕ್ಷಕ ಗೋಪಾಲ್ ಅನುಸರಿಸುತ್ತಿರುವ ವಿನೂತನ ಕಲಿಕಾ ಮಾದರಿಯ ಕಾರಣಕ್ಕೆ ಮುಚ್ಚುವ ಹಂತಕ್ಕೆ ತಲುಪಿದ್ದ ಶಾಲೆ ಇನ್ನೂ ಮುಂದುವರಿದಿದೆ. ಅವರ ಪ್ರೇರಣೆಯಿಂದಲೇ ಶಾಲೆಯ ಹಳೆಯ ವಿದ್ಯಾರ್ಥಿನಿ ಹೊಳೆಕೇವಿ ಇಂಪನಾ ಅಮೃತ ಗ್ರಾಮದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಓದುತ್ತಿದ್ದು, ಬಿಡುವಿನ ವೇಳೆಯಲ್ಲಿ ಮಕ್ಕಳ ಕಲಿಕೆಗೆ ಸಹಕರಿಸುತ್ತಿದ್ದಾಳೆ. ಇನ್ನು ಜೂನ್ ನಲ್ಲಿ ಶಿಕ್ಷಕ ಗೋಪಾಲ್ ನಿವೃತ್ತಿಯಾಗಲಿದ್ದಾರೆ. ವಿದ್ಯಾರ್ಥಿಗಳ ಉತ್ತಮ ಭವಿಷ್ಯ ರೂಪಿಸುವ ನಿಟ್ಟಿನಲ್ಲಿ ಎಲೆಮರೆಯ ಕಾಯಿಯಂತೆ ಕಾರ್ಯ ನಿರ್ವಹಿಸುವ ಇಂತಹ ಶಿಕ್ಷಕರನ್ನು ಸರ್ಕಾರ, ಸಂಘ ಸಂಸ್ಥೆಗಳು ಗುರುತಿಸಿ ಗೌರವಿಸಿದಲ್ಲಿ ಅವರ ಸೇವಾಕಾರ್ಯಕ್ಕೆ ಸಾರ್ಥಕತೆ ಸಿಗಲಿದೆ ಎಂದು ಪಾಲಕರು ಹೇಳಿದ್ದಾರೆ.
ಇದನ್ನೂ ಓದಿ; ರಕ್ಷಣಾ ಸಂಶೋಧನೆ ಅಭಿವೃದ್ಧಿ ಸಂಸ್ಥೆಯಿಂದ ನೇಮಕ; ಗ್ರಾಜುಯೇಟ್ ಮತ್ತು ಟೆಕ್ನೀಷಿಯನ್ಗಳ ಹುದ್ದೆಗೆ ಅರ್ಜಿ ಆಹ್ವಾನ
ದಾಖಲೆ ಇಲ್ಲದೆ ಸಾಗಿಸುತ್ತಿದ್ದ 4 ಕೋಟಿ ಮೌಲ್ಯದ ಚಿನ್ನ, ಬೆಳ್ಳಿ, ವಜ್ರ ವಶಕ್ಕೆ
ತರೀಕೆರೆ: (ನ್ಯೂಸ್ ಮಲ್ನಾಡ್ ವರದಿ) ಅಕ್ರಮವಾಗಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ನಾಲ್ಕು ಕೋಟಿ ಮೌಲ್ಯದ ಚಿನ್ನ, ವಜ್ರ ಬೆಳ್ಳಿ ವಶಕ್ಕೆ ಪಡೆದ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರಿಕೆರೆ ತಾಲೂಕಿನ ಎಂ.ಸಿ. ಹಳ್ಳಿ ಚೆಕ್ ಪೋಸ್ಟ್ ಬಳಿ ನಡೆದಿದೆ.
ಇದನ್ನೂ ಓದಿ; ಇಂತಹ ವಿದ್ಯಾರ್ಥಿಗಳಿಗೆ ಸಿಗಲಿದೆ 1 ಲಕ್ಷ ರೂಪಾಯಿಗಳ ಸ್ಕಾಲರ್ಶಿಪ್!; ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್
ಬೆಂಗಳೂರಿನಿಂದ ಶಿವಮೊಗ್ಗ ಜಿಲ್ಲೆಗೆ ಕೋಟ್ಯಂತರ ಮೌಲ್ಯದ ಚಿನ್ನ, ಡೈಮಂಡ್ಸ್ ಹಾಗೂ ಬೆಳ್ಳಿ ವಸ್ತುಗಳನ್ನು ಟ್ರಕ್ ಮೂಲಕ ಸಾಗಾಟ ಮಾಡಲಾಗುತ್ತಿತ್ತು. ಈ ವೇಳೆ ಚುನಾವಣಾಧಿಕಾರಿಗಳು, ಪೊಲೀಸರು ಟ್ರಕ್ ತಡೆದು ಪರಿಶೀಲನೆ ನಡೆಸಿದಾಗ ಚಿನ್ನಾಭರಣಗಳು ಪತ್ತೆಯಾಗಿದೆ. 6 ಕೆಜಿ 586 ಗ್ರಾಂ ಚಿನ್ನ, 1 ಕೆಜಿ 71.492 ಗ್ರಾಂ ವಜ್ರಾಭರಣ, 1 ಕೆಜಿ 873.731 ಗ್ರಾಂ ಬೆಳ್ಳಿ ವಸ್ತುಗಳನ್ನು ಚೆಕ್ ಪೋಸ್ಟ್ ಸಿಬ್ಬಂದಿ ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ; ಸೌಥ್ ಈಸ್ಟ್ ಸೆಂಟ್ರಲ್ ರೈಲ್ವೆಯಲ್ಲಿ ಉದ್ಯೋಗ; 733 ಹುದ್ದೆಗೆ ಅರ್ಜಿ ಆಹ್ವಾನ












