ಶೃಂಗೇರಿ: (ನ್ಯೂಸ್ ಮಲ್ನಾಡ್ ವರದಿ) ಮರಳು ಅಡ್ಡೆ ಮೇಲೆ ದಾಳಿ ನಡೆಸಿ ಮರಳು ದಂಧೆಯಲ್ಲಿ ತೊಡಗಿದ್ದ 4 ಪಿಕಪ್ ವಾಹನವನ್ನು ವಶಕ್ಕೆ ಪಡೆದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲ್ಲೂಕಿನಲ್ಲಿ ನಡೆದಿದೆ.

ತಡರಾತ್ರಿ 2 ಗಂಟೆ ಸುಮಾರಿಗೆ ಶೃಂಗೇರಿ ತಹಶೀಲ್ದಾರ್ ಅನೂಪ್ ಹಾಗೂ ಕೊಪ್ಪ ತಹಶೀಲ್ದಾರ್ ಲಿಖಿತಾ ಮೋಹನ್ ರಿಂದ ಏಕಕಾಲಕ್ಕೆ ಹಲವು ಕಡೆಗಳಲ್ಲಿ ದಾಳಿ ನಡೆಸಿ ಮರಳು ದಂಧೆಯಲ್ಲಿ ತೊಡಗಿದ್ದ 4 ಪಿಕಪ್ ವಾಹನವನ್ನು ವಶಕ್ಕೆ ಪಡೆದಿದ್ದಾರೆ.


ಇದನ್ನೂ ಓದಿ: ಅನಧಿಕೃತ ಕಟ್ಟಡ ಕಟ್ಟಿದ್ದವರಿಗೆ ಬಿಗ್ ಶಾಕ್; ಯಾಕೆ ಗೊತ್ತಾ? ಇಲ್ಲಿದೆ ನೋಡಿ
ಶೃಂಗೇರಿ ಭಾಗದಲ್ಲಿ ಅವ್ಯಾಹತವಾಗಿ ನಡೆಯುತ್ತಿದ್ದ ಅಕ್ರಮ ಮರಳು ಮಾಫಿಯಾಗೆ ಕಳೆದ ಕೆಲವು ತಿಂಗಳುಗಳಿಂದ ತಡೆ ಬಿದ್ದಿತ್ತು, ಆದರೆ ಸದ್ದಿಲ್ಲದೇ ಕಳೆದ ಒಂದು ತಿಂಗಳಿನಿಂದ ಮತ್ತೆ ಪ್ರಾರಂಭವಾಗಿದೆ. ಈ ಬಗ್ಗೆ ಮಾಹಿತಿಯನ್ನಾಧರಿಸಿ ದಾಳಿ ಮಾಡಿದ ತಹಶೀಲ್ದಾರ್ ಅನೂಪ್ ಹಾಗೂ ಕೊಪ್ಪ ತಹಶೀಲ್ದಾರ್ ಲಿಖಿತಾ ಮೋಹನ್ ದಾಳಿ ನಡೆಸಿ 4 ಪಿಕಪ್ ವಾಹನಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಸಂದರ್ಭದಲ್ಲಿ ಇನ್ನೂ ಹಲವು ಪಿಕಪ್ ವಾಹನಗಳು ಇದ್ದು ದಾಳಿ ಸಂದರ್ಭದಲ್ಲಿ ಸ್ಥಳದಿಂದ ಪರಾರಿಯಾಗಿದ್ದಾರೆ.
ದಾಳಿಯಲ್ಲಿ ಅಡ್ಡಗದ್ದೆ ಬಷೀರ್, ಗಣೇಶ್, ನಾಗೇಶ್, ಅಜ್ಜೊಳ್ಳಿ ರಾಘು ಈ ನಾಲ್ವರಿಗೆ ಸೇರಿದ ಒಟ್ಟು 4 ಪಿಕಪ್ ವಾಹನಗಳನ್ನು ವಶಕ್ಕೆ ಪಡೆದು ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಎಫ್ ಐ ಆರ್ ದಾಖಲಾಗಿದೆ.


ಇದನ್ನೂ ಓದಿ: ರೇಷನ್ ಕಾರ್ಡ್ ನಲ್ಲಿ ಹೆಸರು ಸೇರ್ಪಡೆಗೆ ಅವಕಾಶ
ಪೊಲೀಸ್ ಇಲಾಖೆಯ ವೈಫಲ್ಯದ ಆರೋಪ:
ಅಕ್ರಮ ಮರಳು ಸಾಗಣೆಯಲ್ಲಿ ಸ್ಥಳೀಯರು ಭಾಗಿಗಳಾಗಿದ್ದಾರೆ. ಪ್ರಮುಖರೆನ್ನಿಸಿಕೊಂಡವರು ದಂಧೆಯ ಸೂತ್ರಧಾರರಾಗಿದ್ದು ವಿವಿಧ ರಾಜಕೀಯ ಪಕ್ಷಗಳ ಕೆಲ ನಾಯಕರು ದಂಧೆಯ ನೇತೃತ್ವವಹಿಸಿದ್ದಾರೆ. ಜೊತೆಗೆ ಈ ಮರಳು ದಂಧೆಯನ್ನು ತಡೆಯುವಲ್ಲಿ ಪೊಲೀಸ್ ಇಲಾಖೆ ವೈಫಲ್ಯದ ಆರೋಪ ಕೂಡ ಕೇಳಿ ಬರುತ್ತಿದೆ.

ಇದನ್ನೂ ಓದಿ: ಚಾಕೋಲೆಟ್ ಪ್ರಿಯರಿಗೆ ಶಾಕಿಂಗ್ ನ್ಯೂಸ್; ಚಾಕೋಲೆಟ್ ನಲ್ಲಿ ಆಲ್ಕೋಹಾಲ್ ಅಂಶ ಪತ್ತೆ













