ಶಿವಮೊಗ್ಗ ಡಿಸಿಸಿ ಬ್ಯಾಂಕ್ನ ನಗರ ಶಾಖೆಯಲ್ಲಿ ಆದ ಹಗರಣ ಸಂಬಂಧ ಅಧ್ಯಕ್ಷ ಆರ್. ಎಂ ಮಂಜುನಾಥ್ ಗೌಡ ಅವರ 13.91 ಕೋಟಿ ಆಸ್ತಿಯನ್ನು ಜಾರಿ ನಿರ್ದೇಶನಾಲಯವು ಜಪ್ತಿ ಮಾಡಿದೆ.
ಇದನ್ನೂ ಓದಿ: ವಿಕಲಚೇತನ ಆರೈಕೆದಾರರಿಗೆ 1000 ರೂ.ಪ್ರೋತ್ಸಾಹಧನ; ಈ ರೀತಿ ಅರ್ಜಿ ಸಲ್ಲಿಸಿ

ಶಿವಮೊಗ್ಗ ಜಿಲ್ಲಾ ಸಹಕಾರಿ ಬ್ಯಾಂಕಿನಿಂದ ಹಣವನ್ನು ವಂಚಿಸಿದ ಪ್ರಕರಣದಲ್ಲಿ, ಶಿವಮೊಗ್ಗ ಡಿಸಿಸಿ ಬ್ಯಾಂಕಿನ ಹಾಲಿ ಅಧ್ಯಕ್ಷ ಆರ್.ಎಂ ಮಂಜುನಾಥ ಗೌಡ ಅವರ 13.91 ಕೋಟಿ ಮೌಲ್ಯದ ಸ್ಥಿರ ಮತ್ತು ಚರ ಆಸ್ತಿಗಳನ್ನು ಇಡಿ, ಬೆಂಗಳೂರು ವಲಯ ಕಚೇರಿಯು ಪಿಎಂಎಲ್ಎ, 2002 ರ ನಿಬಂಧನೆಗಳ ಅಡಿಯಲ್ಲಿ ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿದೆ ಎಂದು ತಿಳಿಸಿದೆ.
ಇದನ್ನೂ ಓದಿ: ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಸಲ್ಲಿಸಲು ಈ ದಾಖಲೆ ಕಡ್ಡಾಯ
ನಕಲಿ ಬಂಗಾರ ಅಡಮಾನ ಪ್ರಕರಣ ಸಂಬಂಧ ಏಪ್ರಿಲ್ 8 ರಂದು ಶಿವಮೊಗ್ಗ ಮತ್ತು ಬೆಂಗಳೂರಿನ ವಿವಿಧೆಡೆ ಜಾರಿ ನಿರ್ದೇಶನಾಲಯದ ಅಕಾರಿಗಳು ದಾಳಿ ನಡೆಸಿದ್ದರು. ಈ ಸಂದರ್ಭ ಡಿಜಿಟಲ್ ಸಾಕ್ಷಿ ಸೇರಿದಂತೆ ವಿವಿಧ ಸಾಕ್ಷಿ ಲಭ್ಯವಾಗಿತ್ತು. ಅಲ್ಲದೆ 2.5 ಕೆ.ಜಿ ಚಿನ್ನಾಭರಣ ವಶಕ್ಕೆ ಪಡೆಯಲಾಗಿತ್ತು. ಏಪ್ರಿಲ್ 9 ರಂದು ಮಂಜುನಾಥ ಗೌಡ ಅವರನ್ನು ಇ.ಡಿ. ಅಧಿಕಾರಿಗಳು ಬಂಧಿಸಿದ್ದರು. ಸದ್ಯ ಮಂಜುನಾಥ ಗೌಡ ನ್ಯಾಯಾಂಗ ಬಂಧನದಲ್ಲಿದ್ದಾರೆ.
ಇದನ್ನೂ ಓದಿ: ಜಿಲ್ಲಾ ಆರೋಗ್ಯ ಕೇಂದ್ರದಲ್ಲಿ ಉದ್ಯೋಗ; 12,600 ಸಂಬಳ












