
ತರೀಕೆರೆ: (ನ್ಯೂಸ್ ಮಲ್ನಾಡ್ ವರದಿ) ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆ ಹೊಟ್ಟೆನೋವು ತಾಳಲಾರದೆ ಮನೆಯಲ್ಲೇ ನೇಣು ಬಿಗಿದು ಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಗುಳ್ಳದಮನೆ ಗ್ರಾಮದಲ್ಲಿ ನಡೆದಿದೆ. ಬಿಂದು (21) ಆತ್ಮಹತ್ಯೆಗೆ ಶರಣಾದ ನವವಿವಾಹಿತೆ.
ಇದನ್ನೂ ಓದಿ: ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಮಿಸ್ ಮಾಡ್ದೆ ಈ ಸುದ್ದಿ ಓದಿ

ಕಳೆದ ನ.24 ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದ ಬಿಂದು. ಮೂರು ದಿನದ ಹಿಂದೆ ಗಂಡನ ಜೊತೆ ತವರು ಮನೆಗೆ ಬಂದಿದ್ದಳು. ಮೂರು ದಿನದಿಂದ ದೇವಸ್ಥಾನಗಳಿಗೆ ಸುತ್ತಾಡಿದ್ದ ದಂಪತಿಗಳು ಮನೆಯಲ್ಲಿನ ಪೂಜೆಯಲ್ಲೂ ಪಾಲ್ಗೊಂಡಿದ್ದರು. ಶನಿವಾರ ತೀವ್ರ ಹೊಟ್ಟೆನೋವು ತಾಳಲಾರದೆ ಬಿಂದು ಮನೆಯಲ್ಲೇ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ.

ಇದನ್ನೂ ಓದಿ: 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
ಮೃತ ಬಿಂದುವಿಗೆ ಕಳೆದ ಮೂರ್ನಾಲ್ಕು ವರ್ಷಗಳಿಂದಲೂ ಹೊಟ್ಟೆನೋವು ಸಮಸ್ಯೆ ಇದ್ದು, ಕುಟುಂಬಸ್ಥರು ಆಸ್ಪತ್ರೆಗೂ ತೋರಿಸಿದ್ದರು. ನೋವು ಕಡಿಮೆಯಾಗಿರಲಿಲ್ಲ ಎನ್ನಲಾಗುತ್ತಿದೆ. ಹೊಟ್ಟೆನೋವು ಹೆಚ್ಚಾದ ಹಿನ್ನಲೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ: ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
ಲಿಂಗದಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.













