ಜಯಪುರ: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ

ಜಯಪುರ: (ನ್ಯೂಸ್ ಮಲ್ನಾಡ್ ವರದಿ) ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಆರೋಪಿಗೆ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹50 ಸಾವಿರ ದಂಡ ವಿಧಿಸಿ ಚಿಕ್ಕಮಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ.

ಜಯಪುರ ಪೊಲೀಸ್ ಠಾಣೆಯಲ್ಲಿ 2025ರ ಮಾರ್ಚ್ 26ರಂದು ದಾಖಲಾಗಿದ್ದ ಪ್ರಕರಣದಲ್ಲಿ, ಕೊಪ್ಪ ತಾಲೂಕಿನ ಹೆಗ್ಗಾರು ಗ್ರಾಮದ ಕರೆಮನೆ ನಿವಾಸಿ ಸಂತೋಷ್ ಕೆ.ಎಸ್. (31) ಎಂಬಾತನ ವಿರುದ್ಧ ಬಿಎನ್‌ಎಸ್ ಮತ್ತು ಪೋಕ್ಸೊ ಕಾಯ್ದೆಯ ವಿವಿಧ ಕಲಂಗಳಡಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ವಿಚಾರಣೆ ನಡೆಸಿದ ಚಿಕ್ಕಮಗಳೂರಿನ ಘನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆರೋಪಿಗೆ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹50,000 ದಂಡ ವಿಧಿಸಿದೆ. ಇದಲ್ಲದೆ, ಕರ್ನಾಟಕ ಸಂತ್ರಸ್ತ ಪರಿಹಾರ ಯೋಜನೆ-2011ರಡಿ ನೊಂದ ಬಾಲಕಿಗೆ ₹4 ಲಕ್ಷ ಪರಿಹಾರ ಧನ ನೀಡುವಂತೆ ನ್ಯಾಯಾಲಯ ಆದೇಶಿಸಿದೆ.

ಪ್ರಕರಣದ ತನಿಖೆಯನ್ನು ಅಂದಿನ ಕೊಪ್ಪ ವೃತ್ತದ ಪೊಲೀಸ್ ವೃತ್ತ ನಿರೀಕ್ಷಕರಾಗಿದ್ದ ಮಂಜು ಜೆ. ಪೂರ್ಣಗೊಳಿಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕರಾದ ಬಿ. ಭರತ್ ಕುಮಾರ್ ವಾದ ಮಂಡಿಸಿದ್ದರು. ಪ್ರಕರಣದ ತನಿಖಾ ಸಹಾಯಕರಾಗಿ ಸಿ.ಎಚ್.ಸಿ. ತಿಪ್ಪೇಶ್ ಹಾಗೂ ನ್ಯಾಯಾಲಯದ ಕರ್ತವ್ಯವನ್ನು ಸಿ.ಪಿ.ಸಿ. ಆಕಾಶ್ ನಿರ್ವಹಿಸಿದ್ದರು.

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.