ಶೃಂಗೇರಿ ವಿಧಾನಸಭಾ ವ್ಯಾಪ್ತಿಯ ಮುಖ್ಯರಸ್ತೆಗಳು ಸೇರಿದಂತೆ ಗ್ರಾಮೀಣ ಭಾಗದ ಎಲ್ಲಾ ರಸ್ತೆಗಳು ಗುಂಡಿಮಾಯವಾಗಿ ಬದಲಾಗಿರುವುದುರಿಂದ ವಾಹನ ಸವಾರರು, ಗ್ರಾಮಸ್ಥರು ಹಾಗೂ ಇಲ್ಲಿನ ಪ್ರವಾಸಿ ತಾಣಗಳಿಗೆ ಭೇಟಿ ನೀಡುವ ಪ್ರವಾಸಿಗರು ನರಕಯಾತನೆ ಅನುಭವಿಸುವಂತೆಯಾಗಿದೆ.
ಇದನ್ನೂ ಓದಿ: ಆಸ್ತಿ ಮಾಲೀಕರಿಗೆ ಜಿಬಿಎ ಗುಡ್ನ್ಯೂಸ್; ಮಧ್ಯವರ್ತಿಗಳ ಹಾವಳಿ ಸೇರಿ ಭ್ರಷ್ಟಾಚಾರಕ್ಕೂ ಬ್ರೇಕ್

ಕೆಲವೆಡೆ ರಸ್ತೆ ಗುಂಡಿಗಳನ್ನು ಮುಚ್ಚುವ ಕಾರ್ಯ ಪ್ರಾರಂಭವಾಗಿದೆ ಆದರೆ ಕಾಮಗಾರಿ ಸಂಪೂರ್ಣ ಕಳಪೆಯಾಗಿದೆ ಎಂಬ ಆರೋಪ ಕೇಳಿಬಂದಿದೆ.


ಇದಕ್ಕೆ ಉದಾಹರಣೆ ಎಂಬಂತೆ ಸಂತೋಷ್ ಅರನೂರು ಅವರು ಕಳಪೆ ಕಾಮಗಾರಿಯ ವಿಡಿಯೋ ಒಂದನ್ನು ಹಂಚಿಕೊಂಡಿದ್ದಾರೆ.
ಇದನ್ನೂ ಓದಿ: PM ಕಿಸಾನ್ ಯೋಜನೆಯಿಂದ 35 ಲಕ್ಷ ರೈತರ ಹೆಸರು ಡಿಲೀಟ್
ಹೌದು, ಬಾಳೆಹೊನ್ನೂರಿನಿಂದ ಕೊಪ್ಪ ಮುಖ್ಯ ರಸ್ತೆ ಗುಂಡಿ ಮುಚ್ಚುವ ಕಾರ್ಯ ಪ್ರಾರಂಭವಾಗಿತ್ತು. ಮೊದಲ ದಿನದಲ್ಲಿ ಕಳಪೆಯಾಗಿದ್ದು, ಅದನ್ನು ಸಂತೋಷ್ ಅರನೂರು ವಿಡಿಯೋ ಮಾಡಿ ಕೆಲವು ಗುಂಪುಗಳಿಗೆ ಹಾಕಿದಾಗ ಅಲ್ಲಿದ್ದ ಅಧಿಕಾರಿಗಳಿಗೆ ಮತ್ತು ಜನಪ್ರತಿನಿಧಿಗಳಿಗೆ ತಿಳಿಸಿದ್ದರು. ಇದೀಗ ಅಧಿಕಾರಿಗಳು ಬಂದು ನಿಂತು ರಸ್ತೆಯ ಗುಣಮಟ್ಟದಲ್ಲಿ ಗುಂಡಿ ಮುಚ್ಚುವ ಕಾರ್ಯಪ್ರಾರಂಭವಾಗಿದೆ. ಆದ್ದರಿಂದ ಸಂಬಂಧಪಟ್ಟ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ರಸ್ತೆ ಗುಣಮಟ್ಟವನ್ನು ಪರಿಶೀಲಿಸಿ ಉತ್ತಮ ಗುಣಮಟ್ಟದ ರಸ್ತೆ ನಿರ್ಮಾಣ ಮಾಡಬೇಕು ಎಂದು ಒತ್ತಾಯಿಸಿದ್ದಾರೆ













