ತೀರ್ಥಹಳ್ಳಿ: (ನ್ಯೂಸ್ ಮಲ್ನಾಡ್ ವರದಿ) ಗ್ರಾಹಕರ ಖಾತೆಗೆ ಕನ್ನ ಹಾಕಿದ ಬ್ಯಾಂಕ್ ಉದ್ಯೋಗಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನಲ್ಲಿ ನಡೆದಿದೆ. ಆರಗ ಗ್ರಾಮದ ಸುನಿಲ್ (35) ಆತ್ಮಹತ್ಯೆ ಮಾಡಿಕೊಂಡ ಬ್ಯಾಂಕ್ ಉದ್ಯೋಗಿ.
ಇದನ್ನೂ ಓದಿ; ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?

ಏನಿದು ಘಟನೆ:
ಹೊಸನಗರ ತಾಲೂಕಿನ ಯಡೂರು ಕೆನರಾ ಬ್ಯಾಂಕ್ ನಲ್ಲಿ ಅಧಿಕಾರಿಯಾಗಿದ್ದ ವೇಳೆ ಸುನೀಲ್ ಠೇವಣಿ ಇಟ್ಟಿದ್ದ 8 ಮಂದಿ ಠೇವಣಿದಾರರ ಹಣವನ್ನು ದುರುಪಯೋಗಪಡಿಸಿಕೊಂಡು ಆನ್ ಲೈನ್ ಬೆಟ್ಟಿಂಗ್, ಟ್ರೇಡಿಂಗ್ ದಂಧೆಗಳಲ್ಲಿ ವಿನಿಯೋಗಿಸಿದ್ದ. ಸುಮಾರು 6 ಕೋಟಿಗಳಷ್ಟು ಕೆನರಾ ಬ್ಯಾಂಕ್ ಹೊರೆ ಹೊರಬೇಕಾಯ್ತು. ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ನಗರ ಪೊಲೀಸ್ ಠಾಣೆಯಲ್ಲಿ 2023 ರ ಡಿಸೆಂಬರ್ ನಲ್ಲಿ ಈತನ ಮೇಲೆ ಪ್ರಕರಣ ದಾಖಲಾಗಿ ಜೈಲಿಗೆ ಹೋಗಿದ್ದ.
ಇದನ್ನೂ ಓದಿ; ರಾಜ್ಯದ ರೈತರಿಗೆ ಮತ್ತೊಂದು ಗುಡ್ ನ್ಯೂಸ್; ಸ್ಥಗಿತಗೊಂಡಿದ್ದ ಈ ಯೋಜನೆ ಪುನಾರಂಭ
ಬೇಲ್ ಮೂಲಕ ಹೊರಬಂದಿದ್ದ ಸುನೀಲ್ ಮನನೊಂದ ಗುರುವಾರ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ವಿಷಯ ತಿಳಿಯುತ್ತಿದ್ದಂತೆ ಆತನನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ತೀರ್ಥಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಇದನ್ನೂ ಓದಿ; ನೆಲ್ಲಿಕಾಯಿಯನ್ನು ತಿನ್ನೋದ್ರಿಂದ ಆರೋಗ್ಯಕ್ಕೆ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ?; ಕೇಳಿದ್ರೆ ಶಾಕ್ ಆಗ್ತೀರಾ…












