
ಕಡೂರು: (ನ್ಯೂಸ್ ಮಲ್ನಾಡ್ ವರದಿ) ತಾಲೂಕಿನ ಐತಿಹಾಸಿಕ ಅಯ್ಯನಕೆರೆಯಲ್ಲಿ ಈಜಲು ಹೋಗಿದ್ದ 13 ವರ್ಷದ ಬಾಲಕನೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ನಡೆದಿದೆ. ಚಿಕ್ಕಮಗಳೂರು ನಗರದ ದಂಟರಮಕ್ಕಿ ನಿವಾಸಿಯಾದ ಪೃಥ್ವಿರಾಜ್ ಮೃತಪಟ್ಟ ಬಾಲಕ.
ಸಖರಾಯಪಟ್ಟಣ ಸಮೀಪವಿರುವ ಅಯ್ಯನಕೆರೆಗೆ ಪೃಥ್ವಿರಾಜ್ ತನ್ನ ದೊಡ್ಡಮ್ಮ ಹಾಗೂ ನಾಲ್ವರು ಸ್ನೇಹಿತರ ಜೊತೆ ಸೇರಿ ಈಜಲು ಹೋಗಿದ್ದನು. ಐವರು ಬಾಲಕರು ಕೆರೆಯಲ್ಲಿ ಈಜುತ್ತಿದ್ದಾಗ ಆಕಸ್ಮಿಕವಾಗಿ ಪೃಥ್ವಿರಾಜ್ ನೀರಿನಲ್ಲಿ ಮುಳುಗಿ ಪ್ರಾಣ ಕಳೆದುಕೊಂಡಿದ್ದಾನೆ.

ಈ ಸಂಬಂಧ ಸಖರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
















