ಶಿವಮೊಗ್ಗ: (ನ್ಯೂಸ್ ಮಲ್ನಾಡ್ ವರದಿ) ರೈಲ್ವೆ ಗೇಟ್ನ ಕಂಬಕ್ಕೆ ಡಿಕ್ಕಿಯಾಗಿ ಕಾರು ಪಲ್ಟಿಯಾಗಿರುವ ಘಟನೆ ಶಿವಮೊಗ್ಗದ ಬೊಮ್ಮನಕಟ್ಟೆ ರೈಲ್ವೆ ಗೇಟ್ ಬಳಿ ನಡೆದಿದೆ.
ಇದನ್ನೂ ಓದಿ; 2 ನೇ ವಾರಕ್ಕೆ ಕಾಲಿಟ್ಟ ಜಲಪಾತ ಸಿನಿಮಾ; ರಿವ್ಯೂಸ್ ಮತ್ತು ರೇಟಿಂಗ್ ನ ರೇಸ್ ನಲ್ಲೂ ಮುಂದಿರುವ ಪರಿಸರ ಕಾಳಜಿ ಸಿನಿಮಾ

ನವುಲೆ ಕಡೆಯಿಂದ ಬಂದ ಕಾರು ರೈಲ್ವೆ ಗೇಟ್ ಗೆ ಡಿಕ್ಕಿಯಾಗಿ ಪಲ್ಟಿಯಾಗಿದೆ. ಕಾರಿನಲ್ಲಿ ಮಹಿಳೆ ಮತ್ತು ಪುತ್ರಿ ಇದ್ದರು ಎನ್ನಲಾಗಿದೆ. ಕಾರಿನಲ್ಲಿದ್ದವರನ್ನು ಸ್ಥಳೀಯರು ರಕ್ಷಣೆ ಮಾಡಿದ್ದು, ಸಂಚಾರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಚಿಕ್ಕಮಗಳೂರು ನಗರಸಭೆ ಅಧ್ಯಕ್ಷ ವರಸಿದ್ಧಿ ವೇಣುಗೋಪಾಲ್ ಅಮಾನತು
ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ನಗರಸಭೆ ಅಧ್ಯಕ್ಷ ವರಸಿದ್ದಿ ವೇಣುಗೋಪಾಲ್ ಅವರನ್ನು ಬಿಜೆಪಿ ಪಕ್ಷದಿಂದ ಅಮಾನತು ಮಾಡಿ ಜಿಲ್ಲಾದ್ಯಕ್ಷ ಎಚ್ ಸಿ ಕಲ್ಕುರುಡಪ್ಪ ಆದೇಶ ಹೊರಡಿಸಿದ್ದಾರೆ.
ರಾಜೀನಾಮೆ ವಾಪಸ್ ಪಡೆದಿದ್ದ ವೇಣುಗೋಪಾಲ್:
ಕಳೆದ ನಾಲ್ಕು ತಿಂಗಳಿನಿಂದ ಚಿಕ್ಕಮಗಳೂರು ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವ ವಿಚಾರದಲ್ಲಿ ಬಿಜೆಪಿ ನಗರಸಭೆ ಸದಸ್ಯರು ಹಾಗೂ ಅಧ್ಯಕ್ಷರ ನಡುವೆ ಜಟಾಪಟಿ ನಡೆಯುತ್ತಿದ್ದು, ಪಕ್ಷದ ನಾಯಕರ ಸೂಚನೆ ಮೇರೆಗೆ ಎಡರನೇ ಬಾರಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ವರಸಿದ್ದಿ ವೇಣುಗೋಪಾಲ್ ಇತ್ತೀಚೆಗೆ ರಾಜೀನಾಮೆ ವಾಪಸ್ ಪಡೆದು ಯಾರ ಕಣ್ಣಿಗೂ ಬೀಳದೆ ಕಣ್ಮರೆಯಾಗಿದ್ದರು.












