ಕಳಸ: (ನ್ಯೂಸ್ ಮಲ್ನಾಡ್ ವರದಿ) ರಸ್ತೆಯಲ್ಲಿ ಕಾಡುಕೋಣಗಳ ಹಿಂಡು ಕಂಡು ಕಂಗಾಲಾದ ಕಾರು ಚಾಲಕ ಮರಕ್ಕೆ ಡಿಕ್ಕಿ ಹೊಡೆದ ಘಟನೆ ಶನಿವಾರ ರಾತ್ರಿ ನಡೆದಿದೆ.
ಇದನ್ನೂ ಓದಿ: ಚಿಕ್ಕಮಗಳೂರು ಜಿಲ್ಲೆಯಲ್ಲಿ 12,991 BPL ಕಾರ್ಡ್ ರದ್ದು; ನಿಮ್ಮ ತಾಲೂಕಿನ ರೇಷನ್ ಕಾರ್ಡ್ ಡಿಲೀಟ್ ಆದ ಡಿಟೈಲ್ಸ್ ಇಲ್ಲಿದೆ

ರಾತ್ರಿ 10 ಗಂಟೆಗೆ ಕಳಸದಿಂದ ಗೊರಸುಕುಡಿಗೆಗೆ ಹೋಗುತ್ತಿದ್ದ ಶಾಮಕೀರ್ತನ್ ಎಂಬುವವರು, ತಮ್ಮ ಮನೆ ಸಮೀಪದ ರಾಜ್ಯ ಹೆದ್ದಾರಿಯಲ್ಲಿ ಕಾಡುಕೋಣಗಳ ದೊಡ್ಡ ಹಿಂಡು ಕಂಡು ಭಯಗೊಂಡಿದ್ದಾರೆ. ಇದರಿಂದ ಕಾರು ರಸ್ತೆ ಪಕ್ಕದ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಅವರ ತಾಯಿಗೆ ಗಾಯಗಳಾಗಿವೆ. ಕಳಸದಲ್ಲಿ ಚಿಕಿತ್ಸೆ ಕೊಡಿಸಲಾಗಿದೆ.
ಉಪ ವಲಯ ಅರಣ್ಯಾಧಿಕಾರಿ ಸುಂದರೇಶ್ ಗಾಯಾಳು ಮನೆಗೆ ತೆರಳಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ: ಮೊಟ್ಟೆ ತಿಂದ್ರೆ ಕ್ಯಾನ್ಸರ್ ಬರುತ್ತಾ?; FSSAI ವರದಿ ಇಲ್ಲಿದೆ ನೋಡಿ












