ಚಿಕ್ಕಮಗಳೂರು: ಸಂತೋಷ್, ಶ್ಯಾಮ್ ಗಡಿಪಾರು ನೋಟಿಸ್ ಪ್ರಕರಣ: ತಾತ್ಕಾಲಿಕ ತಡೆಯಾಜ್ಞೆ ನೀಡಿದ ನ್ಯಾಯಾಲಯ

ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಜಿಲ್ಲೆಯಲ್ಲಿ ಚರ್ಚೆಗೆ ಗ್ರಾಸವಾಗಿದ್ದ ಗಡಿಪಾರು ನೋಟಿಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆ ನಡೆದಿದೆ. ಚಿಕ್ಕಮಗಳೂರು ಬಿಜೆಪಿ ಯುವ ಮೋರ್ಚಾ ಅದ್ಯಕ್ಷ ಸಂತೋಷ್ ಕೋಟ್ಯಾನ್ ಹಾಗೂ ಬಜರಂಗದಳದ ಶ್ಯಾಮ್ ವಿರುದ್ಧ ಜಾರಿಗೊಳಿಸಲಾಗಿದ್ದ ಗಡಿಪಾರು ನೋಟಿಸ್‌ಗೆ ರಾಜ್ಯ ಉಚ್ಚ ನ್ಯಾಯಾಲಯ ಇಂದು ತಾತ್ಕಾಲಿಕ ತಡೆಯಾಜ್ಞೆ ನೀಡಿದೆ.


ಇದನ್ನೂ ಓದಿ: ಆಸ್ತಿ ನೋಂದಣಿ ನಿಯಮಗಳಲ್ಲಿ ಮಹತ್ವದ ಬದಲಾವಣೆ; ಇನ್ಮುಂದೆ ಆಸ್ತಿ ರಿಜಿಸ್ಟ್ರೇಷನ್ ಗೆ ಈ ದಾಖಲೆಗಳು ಕಡ್ಡಾಯ!


ಈ ಪ್ರಕರಣವು ಇತ್ತೀಚಿಗೆ ರಾಜಕೀಯ ಹಾಗೂ ಸಾಮಾಜಿಕ ವಲಯದಲ್ಲಿ ದೊಡ್ಡ ಮಟ್ಟದ ಚರ್ಚೆಗೆ ಕಾರಣವಾಗಿತ್ತು. ಸಂತೋಷ್ ಕೋಟ್ಯಾನ್ ಹಾಗೂ ಶ್ಯಾಮ್ ವಿರುದ್ಧ ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟುಮಾಡುವ ಸಾಧ್ಯತೆ ಇದೆ ಎಂಬ ಕಾರಣ ನೀಡಿ ಚಿಕ್ಕಮಗಳೂರು ಜಿಲ್ಲಾಡಳಿತ ಗಡಿಪಾರು ನೋಟಿಸ್ ಜಾರಿ ಮಾಡಿತ್ತು. ಇದನ್ನು ಪ್ರಶ್ನಿಸಿ ವಕೀಲರ ತಂಡ ನ್ಯಾಯಾಲಯದ ಮೊರೆ ಹೋಗಿದ್ದರು.

ಅರ್ಜಿಯ ವಿಚಾರಣೆ ವೇಳೆ ವಾದಗಳನ್ನು ಆಲಿಸಿದ ನ್ಯಾಯಾಲಯ ತಾತ್ಕಾಲಿಕವಾಗಿ ಗಡಿಪಾರು ನೋಟಿಸ್ ಜಾರಿಗೆ ತಡೆ ನೀಡಿದ್ದು, ಅಂತಿಮ ತೀರ್ಪು ಬರುವವರೆಗೆ ಈ ತಡೆಯಾಜ್ಞೆ ಮುಂದುವರಿಯಲಿದೆ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.


ಇದನ್ನೂ ಓದಿ: 6 ರಾಶಿಗೆ ಪ್ರಗತಿಯ ಹಾದಿ ತೆರೆಯಲಿದೆ.. ಭರ್ಜರಿ ಲಕ್‌!


 

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.