ಎನ್. ಆರ್. ಪುರ: (ನ್ಯೂಸ್ ಮಲ್ನಾಡ್ ವರದಿ) ಮಹಿಳೆಯೋರ್ವಳ ಜೊತೆಗಿನ ಅನೈತಿಕ ಸಂಬಂಧ ವಿಚಾರವಾಗಿ ಆಕೆ ಮತ್ತು ಅವಳ ಪತಿಯನ್ನು ಭೀಕರವಾಗಿ ಕೊಲೆ ಮಾಡಿದ್ದ ಆರೋಪಿಗೆ ಚಿಕ್ಕಮಗಳೂರು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮರಣದಂಡನೆ ಶಿಕ್ಷೆ ವಿಧಿಸಿ ಆದೇಶಿಸಿದೆ.
ಇದನ್ನೂ ಓದಿ: ಶಿಕ್ಷಕರ ಬಡ್ತಿಗೆ ಹೊಸ ಮಾರ್ಗಸೂಚಿ ಪ್ರಕಟ; ಇಷ್ಟು ವರ್ಷಗಳ ಸೇವೆ ಕಡ್ಡಾಯ

2019ರ ಆಗಸ್ಟ್ 30ರಂದು ಚಿಕ್ಕಮಗಳೂರು ಜಿಲ್ಲೆಯ NR ಪುರ ತಾಲೂಕಿನ ಸಾತ್ಕೋಳಿ ಗ್ರಾಮದ ಮನೆಯಲ್ಲಿ ಮಲಗಿದ್ದ ಗಂಡ-ಹೆಂಡತಿಯನ್ನು ಆರೋಪಿ ಗೋವಿಂದಪ್ಪ ಎಂಬಾತ ಹತ್ಯೆ ಮಾಡಿದ್ದ. ಆರೋಪಿ ಮಚ್ಚಿನಿಂದ ದಾಳಿ ನಡೆಸಿದ್ದ ಪರಿಣಾಮ ಧರ್ಮಯ್ಯ (53) ಮತ್ತು ಭಾರತಿ (33) ಮೃತಪಟ್ಟಿದ್ದರು.
ಇದನ್ನೂ ಓದಿ: ಎಸ್ಎಸ್ಎಲ್ಸಿ, ಪಿಯುಸಿ ಪಾಸ್ ಆದವರಿಗೆ ಉದ್ಯೋಗವಕಾಶ; ಆಕರ್ಷಕ ವೇತನ
ಭಾರತಿಯೊಂದಿಗೆ ಆರೋಪಿ ಗೋವಿಂದಪ್ಪನಿಗೆ ಅಕ್ರಮ ಸಂಬಂಧವಿತ್ತು. ಇದೇ ವಿಚಾರವಾಗಿ ಗೋವಿಂದಪ್ಪನ ಜೊತೆ ಭಾರತಿ ಪತಿ ಧರ್ಮಯ್ಯ ಜಗಳವಾಡಿದ್ದ. ಬಳಿಕ ಗ್ರಾಮದ ಹಿರಿಯರ ಸಮ್ಮುಖದಲ್ಲಿ ಪಂಚಾಯತಿ ಕೂಡ ನಡೆದಿತ್ತು. ಗಲಾಟೆ ನಡೆದ ಎರಡು ತಿಂಗಳ ಬಳಿಕ ಭಾರತಿ ಮತ್ತು ಪತಿ ಧರ್ಮಯ್ಯನನ್ನು ಗೋವಿಂದಪ್ಪ ಹತ್ಯೆ ಮಾಡಿದ್ದು, ಈ ಬಗ್ಗೆ NR ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಕೇಸ್ ಸಂಬಂಧ ಮಹತ್ವದ ತೀರ್ಪು ನೀಡಿರುವ ನ್ಯಾಯಾಲಯ ಆರೋಪಿಗೆ ಮರಣದಂಡನೆ ಶಿಕ್ಷೆಯ ಜೊತೆಗೆ 20 ಸಾವಿರ ರೂ. ದಂಡ ವಿಧಿಸಿ ಮಹತ್ವದ ಆದೇಶ ನೀಡಿದೆ.
ಇದನ್ನೂ ಓದಿ: ಅಕ್ರಮ ಪಂಪ್ ಸೆಟ್ ಹೊಂದಿದ್ರೆ ಈ ಸುದ್ದಿ ಓದಿ; ಚಿಕ್ಕಮಗಳೂರು ಉಸ್ತುವಾರಿ ಸಚಿವರಿಂದ ರೈತರಿಗೆ 3 ತಿಂಗಳು ಮಾತ್ರ ಟೈಲ್!












