ಕೊಟ್ಟಿಗೆಹಾರ: ಸಿಲಿಂಡ‌ರ್ ಸ್ಫೋಟಗೊಂಡು ಮನೆ ಸಂಪೂರ್ಣ ನೆಲಸಮ

ಕೊಟ್ಟಿಗೆಹಾರ: (ನ್ಯೂಸ್ ಮಲ್ನಾಡ್ ವರದಿ) ಮನೆಯಲ್ಲಿದ್ದ ಸಿಲಿಂಡ‌ರ್ ಸ್ಫೋಟಗೊಂಡು ಮನೆ ಸಂಪೂರ್ಣ ನೆಲಸಮವಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಗಬ್ಬಲ್ ಸಮೀಪದ ಕಂಬಳಿಹಾರ ಗ್ರಾಮದಲ್ಲಿ ನಿನ್ನೆ (ಮಂಗಳವಾರ) ನಡೆದಿದೆ.


ಇದನ್ನೂ ಓದಿ: KSRTC ಬಸ್‌ ನಲ್ಲಿ ಪ್ರಯಾಣ ಮಾಡುವವರಿಗೆ ಸಿಹಿಸುದ್ದಿ; ಏನದು ಗೊತ್ತಾ? ಇಲ್ಲಿದೆ ನೋಡಿ


ಮನೆ ಮಾಲೀಕ ಬಸಯ್ಯ ಹಿರೇಮಠ ಎಂಬವರು ಕೂಲಿ ಕೆಲಸಕ್ಕೆ ಹೋದ ವೇಳೆ ಈ ಘಟನೆ ನಡೆದ ಕಾರಣ ಭಾರೀ ಅನಾಹುತ ತಪ್ಪಿದೆ. ಆದರೆ, ಸಿಲಿಂಡರ್ ಸ್ಪೋಟಗೊಂಡ ರಭಸಕ್ಕೆ ಗುಡಿಸಲು ಸೇರಿದಂತೆ ವಸ್ತುಗಳು ಸುಟ್ಟು ಕರಕಲಾಗಿದೆ.


ಇದನ್ನೂ ಓದಿ: ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಮಿಸ್‌ ಮಾಡ್ದೆ ಈ ಸುದ್ದಿ ಓದಿ


ಏಕಾಂಗಿಯಾಗಿ ಬದುಕುತ್ತಿರುವ ಬಸಯ್ಯ, ಮನೆ ಸ್ಥಿತಿ ಕಂಡು ಕಣ್ಣೀರಿಟ್ಟಿದ್ದಾರೆ. ಇದ್ದೊಂದು ಗುಡಿಸಲು ಬೆಂಕಿಗಾಹುತಿಯಾಗಿದ್ದರಿಂದ ಅವರಿಗೆ ಮಲಗೋಕು ಜಾಗ ಇಲ್ಲದಂತಾಗಿದೆ.

ಬಾಳೂರು ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


ಇದನ್ನೂ ಓದಿ: 3 ಮದ್ಯದ ಬಾಟಲ್‌ ಖರೀದಿಸಿದ್ರೆ 1 ಫ್ರೀ; ಹೊಸ ವರ್ಷದ ಆಫರ್‌, ಯಾರಿಗುಂಟು ಯಾರಿಗಿಲ್ಲ!


 

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.